ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ದಾಖಲಿಸಿಕೊಳ್ಳದ ಕಾರಣಕ್ಕೆ ಆಕೆ ಆಸ್ಪತ್ರೆಯ ಹೊರಗಡೆಯೇ ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
ಸೋಮವಾರ ರಾತ್ರಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ನೋವಿನಿಂದ ನರಳಿದ್ದಳು. ಕೂಡಲೇ ಮಹಿಳೆಯ ಕುಟುಂಬಸ್ಥರು ಆಕೆಯನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಆದರೆ, ಆಸ್ಪತ್ರೆಯ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ದಾಖಲಿಸಿಕೊಳ್ಳಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಆಸ್ಪತ್ರೆಯವರೆಗೆ ಹೆರಿಗೆ ಮಾಡಿಸುವ ಹಾಗೂ ಕೆಲ ಮಹಿಳೆಯರು ಗರ್ಭಿಣಿಯ ಸುತ್ತ ಸೀರೆಗಳು ಹಿಡಿದು ಸುತ್ತುವರಿರುವ ದೃಶೃಗಳು ವಿಡಿಯೋದಲ್ಲಿ ಸೆರೆಯಾಗಿವೆ. ಈ ವಿಡಿಯೋದಲ್ಲಿ ಆಸ್ಪತ್ರೆ ಆಡಳಿತದ ಭದ್ರತಾ ಸಿಬ್ಬಂದಿಯೂ ಕಾಣಿಸಿಕೊಂಡಿದ್ದಾರೆ. ಹೆರಿಗೆ ಬಳಿಕ ತಾಯಿ ಹಾಗೂ ಶಿಶುವನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಸದ್ಯ ತಾಯಿ ಮತ್ತು ನವಜಾತ ಶಿಶು ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದಾರೆ.
ಐವರು ವೈದ್ಯರ ಅಮಾನತು: ಈ ಘಟನೆಯ ನಂತರ ದೆಹಲಿ ಆರೋಗ್ಯ ಇಲಾಖೆ ತಕ್ಷಣವೇ ಎಚ್ಚೆತುಕೊಂಡಿದೆ. ವಿಶೇಷ ತಂಡ ಸಫ್ದರ್‌ಜಂಗ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೂ ಆದೇಶಿಸಲಾಗಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಐವರು ವೈದ್ಯರನ್ನು ಕರ್ತವ್ಯದಿಂದ ತೆಗೆದುಹಾಕಲಾಗಿದೆ.
ಇತ್ತ, ದೆಹಲಿ ಮಹಿಳಾ ಆಯೋಗ ಕೂಡ ಈ ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದು, ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಸಫ್ದರ್‌ಜಂಗ್ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಿದ್ದಾರೆ.
ಇದನ್ನೂ ಓದಿ: ನೀಟ್ ಪರೀಕ್ಷಾ ಕೇಂದ್ರದಲ್ಲಿ ತೆಗೆಸಿದ ಒಳಒಡುಪು ಧರಿಸದಂತೆಯೂ ಹೇಳಿದ್ದರು: ಕೇರಳದ ವಿದ್ಯಾರ್ಥಿನಿ ಅಳಲು