ನವದೆಹಲಿ: ಭಾರತದ ಕೊರೊನಾ ವಿರುದ್ಧದ ಹೋರಾಟಕ್ಕೆ ನೆದರ್ಲ್ಯಾಂಡ್ ನೆರವು ನೀಡಿದ್ದು, 449 ವೆಂಟಿಲೇಟರ್ಗಳು, 100 ಆಮ್ಲಜನಕ ಸಾಂದ್ರಕಗಳು ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ಒಳಗೊಂಡ ಮೊದಲ ಸಾಗಣೆ ಭಾರತಕ್ಕೆ ಆಗಮಿಸಿದೆ.
ನೆದರ್ಲ್ಯಾಂಡ್ಸ್ನ ಈ ಬೆಂಬಲವನ್ನು ಭಾರತವು ಗೌರವಿಸುತ್ತದೆ ಎಂದು ಎಂಇಎ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಉಳಿದ ವೈದ್ಯಕೀಯ ಉಪಕರಣಗಳನ್ನು ರವಾನಿಸಲಾಗುವುದು ಎಂದು ಮಾಹಿತಿ ನೀಡಿದರು.
"ನಮ್ಮ ಬಹುಮುಖಿ ಸಹಕಾರವನ್ನು ಇನ್ನಷ್ಟು ಬಲಪಡಿಸುತ್ತದೆ. ಮೊದಲು 449 ವೆಂಟಿಲೇಟರ್ಗಳು, 100 ಆಮ್ಲಜನಕ ಸಾಂದ್ರಕಗಳು ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ನೆದರ್ಲ್ಯಾಂಡ್ನಿಂದ ಆಗಮಿಸಿದೆ. ಮುಂಬರುವ ದಿನಗಳಲ್ಲಿ ಉಳಿದ ವೈದ್ಯಕೀಯ ಉಪಕರಣಗಳನ್ನು ರವಾನಿಸಲಾಗುವುದು" ಎಂದು ಬಾಗ್ಚಿ ಟ್ವೀಟ್ ಮಾಡಿದ್ದಾರೆ.