ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎ ಎಸ್ ಓಕಾ ಹಾಗೂ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಸೇರಿದಂತೆ ದೇಶದ ವಿವಿಧ ಕೋರ್ಟ್‌ಗಳಿಂದ ಸುಪ್ರೀಂಕೋರ್ಟ್‌ಗೆ ಬಡ್ತಿ ಪಡೆದಿದ್ದ 9 ನ್ಯಾಯಮೂರ್ತಿಗಳು ಇಂದು ಪ್ರಮಾಣವಚನ ಸ್ವೀಕರಿಸಿದರು.
ಸುಪ್ರೀಂ ಕೋರ್ಟ್‌ನ ಹೆಚ್ಚುವರಿ ಕಟ್ಟಡದ ಕಾಂಪ್ಲೆಕ್ಸ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ನ್ಯಾಯಮೂರ್ತಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ರೀತಿಯ ಕೋವಿಡ್ ನಿಯಮಗಳನ್ನು ಪಾಲಿಸಲಾಯಿತು.
9 ನ್ಯಾಯಮೂರ್ತಿಗಳು ಸುಪ್ರೀಂ ಕೋರ್ಟ್‌ಗೆ ಬಡ್ತಿ ಪಡೆದು ಪ್ರಮಾಣವಚನ ಸ್ವೀಕರಿಸಿರುವುದು ದೇಶದ ಇತಿಹಾಸದಲ್ಲೇ ಇದೇ ಮೊದಲು. ನೂತನ ನ್ಯಾಯಮೂರ್ತಿಗಳ ಸೇರ್ಪಡೆಯೊಂದಿಗೆ ಸಿಜೆಐ ಸೇರಿದಂತೆ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ನ್ಯಾ. ಬಿ ವಿ ನಾಗರತ್ನ ಸೇರಿ 9 ಮಂದಿ ಸುಪ್ರೀಂ ಜಸ್ಟೀಸ್ಗಳಾಗಿ ನೇಮಕ ಮಾಡಿ ರಾಷ್ಟ್ರಪತಿ ಆದೇಶ
ಕರ್ನಾಟಕ ಹೈಕೋರ್ಟ್‌ನ ಸಿ ಜೆ ಯಾಗಿದ್ದ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ, ರಾಜ್ಯ ಹೈಕೋರ್ಟ್‌ನ ನ್ಯಾಯಮೂರ್ತಿ ಬಿ.ವಿ. ನಾಗರತ್ನ, ಸಿಕ್ಕೀಂ ಹೈಕೋರ್ಟ್‌ನ ಸಿಜೆಯಾಗಿದ್ದ ನ್ಯಾಯಮೂರ್ತಿ ಜಿತೇಂದ್ರ ಕುಮಾರ್ ಮಹೇಶ್ವರಿ, ತೆಲಂಗಾಣ ಹೈಕೋರ್ಟ್ ಸಿಜೆಯಾಗಿದ್ದ ನ್ಯಾ. ಹಿಮ ಕೊಹ್ಲಿ, ಕೇರಳ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿದ್ದ ಸಿ ಟಿ ರವಿಕುಮಾರ್, ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ಎಂ. ಸುಂದ್ರೇಶ್, ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಬೆಲ ಎಂ ತ್ರಿವೇದಿ, ಹಿರಿಯ ವಕೀಲ, ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್. ನರಸಿಂಹ ಪ್ರಮಾಣವಚನ ಸ್ವೀಕರಿಸಿದರು.
ಕರ್ನಾಟಕದ ನ್ಯಾ. ಬಿ.ವಿ. ನಾಗರತ್ನ ಅವರು ಹಿರಿತನದ ಆಧಾರದ ಮೇಲೆ 2027ಕ್ಕೆ ಮುಂದಿನ ಸಿಜೆಐ ಆಗಲಿದ್ದಾರೆ. ಆ ಮೂಲಕ ದೇಶದ ಇತಿಹಾಸದಲ್ಲೇ ಮೊದಲ ಮಹಿಳಾ ಸಿಜೆಐ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ. 1962ರ ಅಕ್ಟೋಬರ್‌ನಲ್ಲಿ ಜನಿಸಿರುವ ನ್ಯಾ.ನಾಗರತ್ನ ಅವರು ಮಾಜಿ ಸಿಜೆಐ ಇ.ಎಸ್. ವೆಂಕಟರಾಮಯ್ಯ ಅವರ ಪುತ್ರಿ ಅನ್ನೋದು ಮತ್ತೊಂದು ವಿಶೇಷವಾಗಿದೆ.
ಇದನ್ನೂ ಓದಿ: ಮೊದಲ ಮಹಿಳಾ ಸಿಜೆಐ ಆಗ್ತಾರೆ ಕನ್ನಡತಿ ನ್ಯಾ. ನಾಗರತ್ನರ ಹಿನ್ನೆಲೆ, ಸಾಧನೆ.. ಅಪ್ಪನ ಹಾದಿಯಲ್ಲಿ ಮಗಳು..