ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧಂಖರ್ ಅವರು ಇಂದು ಭಾರತದ ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಾಹಿತಿಯ ಪ್ರಕಾರ, ಧಂಖರ್ ಅವರು ಮಧ್ಯಾಹ್ನ 12:30ರ ಸುಮಾರಿಗೆ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಬಹುದು. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಜಗದೀಪ್ ಧಂಖರ್ ಅವರು ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವ ಅವರನ್ನು ಸೋಲಿಸಿ, ವಿಜಯ ಸಾಧಿಸಿದ್ದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನವಾಗಿ ಆಯ್ಕೆಯಾದ ಉಪಾಧ್ಯಕ್ಷ ಜಗದೀಪ್ ಧನಕರ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಲಿದ್ದಾರೆ. ಜಗದೀಪ್ ಧಂಖರ್ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ದೇಶದ 14ನೇ ಉಪರಾಷ್ಟ್ರಪತಿ ಆಗಲಿದ್ದಾರೆ. ಅಷ್ಟೇ ಅಲ್ಲ ಅವರೇ ರಾಜ್ಯ ಸಭೆಯ ಸಭಾಪತಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.
ಇದನ್ನು ಓದಿ:ಬಿಹಾರ ವಿಧಾನಸಭಾ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಮಹಾಮೈತ್ರಿಕೂಟ