ETV Bharat / bharat

ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ನ್ಯೂಸ್​ಕ್ಲಿಕ್​ ಸಂಪಾದಕ ಪುರಕಾಯಸ್ಥ - ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಬೀರ್

ಭಯೋತ್ಪಾದನಾ ವಿರೋಧಿ ಕಾಯ್ದೆಯಡಿ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

NewsClick founder moves SC challenging arrest under anti-terror law

author img

By ETV Bharat Karnataka Team

Published : Oct 16, 2023, 2:18 PM IST

ನವದೆಹಲಿ: ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಂಧನ ಮತ್ತು ರಿಮಾಂಡ್ ಅನ್ನು ರದ್ದುಪಡಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ನೇತೃತ್ವದ ಪೀಠವು ಪುರಕಾಯಸ್ಥ ಪರ ವಕೀಲ ಕಪಿಲ್ ಸಿಬಲ್ ಅವರಿಗೆ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ಸಿಬಲ್, "ಇದು ನ್ಯೂಸ್ ಕ್ಲಿಕ್ ಗೆ ಸಂಬಂಧಿಸಿದ ವಿಷಯವಾಗಿದೆ. ಪತ್ರಕರ್ತರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇಲ್ಲಿ ಆರೋಪಿಗಳಲ್ಲಿ ಒಬ್ಬರು 75 ವರ್ಷದ ವ್ಯಕ್ತಿ" ಎಂದರು. ತುರ್ತು ವಿಚಾರಣೆಯ ಮನವಿಯನ್ನು ಪರಿಗಣಿಸಲಾಗುವುದು ಎಂದು ಸಿಬಲ್ ಅವರಿಗೆ ನ್ಯಾಯಪೀಠ ಹೇಳಿತು.

ಯುಎಪಿಎ ಪ್ರಕರಣದಲ್ಲಿ ಪುರಕಾಯಸ್ಥ ಮತ್ತು ಚಕ್ರವರ್ತಿಯ ಬಂಧನ ಮತ್ತು ನಂತರದ ಪೊಲೀಸ್ ರಿಮಾಂಡ್ ವಿರುದ್ಧದ ಮನವಿಯನ್ನು ದೆಹಲಿ ಹೈಕೋರ್ಟ್ ಅಕ್ಟೋಬರ್ 13 ರಂದು ವಜಾಗೊಳಿಸಿತ್ತು. ಭಾರತದಲ್ಲಿ ಚೀನಾ ಪರ ಪ್ರಚಾರ ಮಾಡಲು ಹಣ ಸ್ವೀಕರಿಸಿದ ಆರೋಪದ ಮೇಲೆ ದೆಹಲಿ ಪೊಲೀಸರ ವಿಶೇಷ ಸೆಲ್ ಅಕ್ಟೋಬರ್ 3 ರಂದು ಪುರಕಾಯಸ್ಥ ಮತ್ತು ಚಕ್ರವರ್ತಿಯನ್ನು ಯುಎಪಿಎ ಆರೋಪಗಳ ಅಡಿ ಬಂಧಿಸಿತ್ತು.

ಭಾರತದ ಸಾರ್ವಭೌಮತ್ವವನ್ನು ದುರ್ಬಲಗೊಳಿಸಲು ಮತ್ತು ಸಮುದಾಯಗಳ ನಡುವೆ ಭಿನ್ನಾಭಿಪ್ರಾಯಗಳ ಬೀಜ ಬಿತ್ತಲು ನ್ಯೂಸ್​ಕ್ಲಿಕ್ ಚೀನಾದಿಂದ ದೊಡ್ಡ ಮೊತ್ತದ ಹಣ ಸ್ವೀಕರಿಸಿದೆ ಎಂದು ಎಫ್ಐಆರ್ ನಲ್ಲಿ ಆರೋಪಿಸಲಾಗಿದೆ. 2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣೆಯನ್ನು ಹಾಳುಗೆಡವಲು ಪುರಕಾಯಸ್ಥ ಪೀಪಲ್ಸ್ ಅಲೈಯನ್ಸ್ ಫಾರ್ ಡೆಮಾಕ್ರಸಿ ಅಂಡ್ ಸೆಕ್ಯುಲರಿಸಂ (ಪಿಎಡಿಎಸ್) ಎಂಬ ಗುಂಪಿನೊಂದಿಗೆ ಸೇರಿಕೊಂಡು ಕೆಲಸ ಮಾಡಿದ್ದಾರೆ ಎಂದು ಎಫ್ಐಆರ್​ನಲ್ಲಿ ಆರೋಪಿಸಲಾಗಿದೆ.

ಕಾಶ್ಮೀರ ಮತ್ತು ಅರುಣಾಚಲ ಪ್ರದೇಶವನ್ನು ವಿವಾದಿತ ಪ್ರದೇಶಗಳು ಎಂದು ನ್ಯೂಸ್ ಕ್ಲಿಕ್ ಸಂಸ್ಥಾಪಕರು ಜಾಗತಿಕವಾಗಿ ಮತ್ತು ದೇಶೀಯವಾಗಿ ಪ್ರಚಾರ ಮಾಡುತ್ತಿದ್ದಾರೆ ಹಾಗೂ ಭಾರತದ ನಕ್ಷೆಯನ್ನು ತಿರುಚುವ ಮೂಲಕ ಭಾರತದ ಏಕತೆ ಮತ್ತು ಪ್ರಾದೇಶಿಕ ಸಮಗ್ರತೆಯ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ಸುದ್ದಿ ವೆಬ್ ಸೈಟ್ ಸಂಪಾದಕ ಪ್ರಬೀರ್ ಪುರಕಾಯಸ್ಥ ಮತ್ತು ಅವರ ಸಹಚರರು ಜೋಸೆಫ್ ರಾಜ್, ಅನೂಪ್ ಚಕ್ರವರ್ತಿ (ಅಮಿತ್ ಚಕ್ರವರ್ತಿ ಅವರ ಸಹೋದರ), ಬಪ್ಪಾದಿತ್ಯ ಸಿನ್ಹಾ (ವರ್ಚುವೇಲ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್​ನ ಪ್ರವರ್ತಕ) ಅವರಿಂದ ಅಕ್ರಮವಾಗಿ ಹಣ ಪಡೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಈ ಹಣವನ್ನು ತೀಸ್ತಾ ಸೆಟಲ್ವಾಡ್ ಅವರ ಸಹಚರರಾದ ಗೌತಮ್ ನವ್ಲಾಖಾ, ಜಾವೇದ್ ಆನಂದ್, ತಮಾರಾ, ಜಿಬ್ರಾನ್, ಊರ್ಮಿಲೇಶ್, ಅರಾತ್ರಿಕಾ ಹಲ್ದರ್, ಪರಂಜಯ್ ಗುಹಾ ಠಾಕುರ್ತಾ, ತ್ರಿನಾ ಶಂಕರ್ ಮತ್ತು ಪತ್ರಕರ್ತ ಅಭಿಸಾರ್ ಶರ್ಮಾ ಅವರಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ : ಸಂಘರ್ಷ ಕೊನೆಗೊಳಿಸಲು ರಷ್ಯಾ ಮಧ್ಯಸ್ಥಿಕೆಗೆ ಬೇಡಿಕೆ ಇಟ್ಟ ಹಮಾಸ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.