ETV Bharat / bharat

ನಿಷೇಧಿಸಿದ್ದರೂ ಪಿಎಫ್​ಐ ಸಕ್ರಿಯ ಚಟುವಟಿಕೆ.. ಕೇರಳದ 56 ಕಡೆ ಎನ್​ಐಎ ದಾಳಿ - nia attack on pfi

ಕೇರಳದಲ್ಲಿ 56 ಕಡೆ ಎನ್​ಐಎ ದಾಳಿ- ನಿಷೇಧಿತ ಪಿಎಫ್​ಐ ಸಂಘಟನೆ ಚಟುವಟಿಕೆ ಮೇಲೆ ದಾಳಿ- ಪಿಎಫ್​ಐ ನಿಷೇಧವಾಗಿದ್ದರೂ ಸಕ್ರಿಯ ಕಾರ್ಯಾಚರಣೆ

nia-conducts-raids-at-56-locations-in-kerala
ಕೇರಳದ 56 ಕಡೆ ಎನ್​ಐಎ ದಾಳಿ
author img

By

Published : Dec 29, 2022, 9:01 AM IST

Updated : Dec 29, 2022, 1:15 PM IST

ನವದೆಹಲಿ: ನಿಷೇಧಕ್ಕೊಳಗಾಗಿದ್ದರೂ ಪಾಪ್ಯುಲರ್​ ಫ್ರಂಟ್​ ಆಫ್ ಇಂಡಿಯಾ(ಪಿಎಫ್​ಐ)ದ ಚಟುವಟಿಕೆಗಳು ಕಂಡುಬಂದ ಹಿನ್ನೆಲೆಯಲ್ಲಿ ಕೇರಳದ 56 ಕಡೆ ರಾಷ್ಟ್ರೀಯ ತನಿಖಾ ದಳ(ಎನ್​ಐಎ) ಇಂದು ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದೆ.

ಪಿಎಫ್‌ಐನ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರು ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ಕೃತ್ಯಗಳ ಸಂಚು, ವಿದೇಶದಿಂದ ಹಣ ಸಂಗ್ರಹ ಆರೋಪದ ಮೇಲೆ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಎರ್ನಾಕುಲಂ, ಆಲಪ್ಪುಳ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ದಾಳಿ ನಡೆದಿದೆ.

ಕೇಂದ್ರ ಗೃಹ ಸಚಿವಾಲಯದ ಪ್ರಕಾರ, ನಿಷೇಧಿತ ಸಂಘಟನೆಯು ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕದಲ್ಲಿದೆ. ಅದರ ಮೂಲಕ ಹಣವನ್ನು ಸಂಗ್ರಹಿಸಲು ಪ್ರಯತ್ನಿಸುತ್ತಿದೆ. ಬೇರೆ ಹೆಸರಿನಲ್ಲಿ ಪಿಎಫ್​ಐ ಅನ್ನು ಮರುಸ್ಥಾಪಿಸಲು ಪ್ರಯತ್ನಿಸಲಾಗುತ್ತಿದೆ ಎಂಬುದು ತಿಳಿದುಬಂದಿದೆ.

ಕೇರಳದಲ್ಲಿ ಪಿಎಫ್​ಐನ ಸಕ್ರಿಯ ಸದಸ್ಯರಲ್ಲದೇ ಬಾಹ್ಯವಾಗಿಯೂ ಬೆಂಬಲ ನೀಡಲಾಗುತ್ತಿದೆ. ಸಂಘಟನೆಗಾಗಿ ಕೆಲಸ ಮಾಡುತ್ತಿದ್ದಾರೆ. ನಿಷೇಧದ ಮಧ್ಯೆಯೂ ಸಕ್ರಿಯ ಸದಸ್ಯರನ್ನು ರಾಜ್ಯ ಹೆಚ್ಚಿನ ಸಂಖ್ಯೆಯಲ್ಲಿ ಹೊಂದಿದೆ. ಅವರ ಚಟುವಟಿಕೆಗಳನ್ನು ನಿಯಂತ್ರಿಸಲು ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

5 ವರ್ಷ ನಿಷೇಧಿಸಿದ ಕೇಂದ್ರ ಸರ್ಕಾರ: ದೇಶದಲ್ಲಿ ಬಾಹ್ಯ ಶಕ್ತಿಗಳ ಬೆಂಬಲದಿಂದ ಭಯೋತ್ಪಾದನೆಗೆ ಕುಮ್ಮಕ್ಕು, ಅಕ್ರಮವಾಗಿ ಹಣ ಸಂಗ್ರಹಣೆ ಆರೋಪದ ಮೇಲೆ ಕೇಂದ್ರ ಸರ್ಕಾರ ಸೆಪ್ಟೆಂಬರ್​ 22 ರಂದು ಕಾನೂನು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ(UAPA) ಅಡಿಯಲ್ಲಿ ಪಿಎಫ್​ಐ ಸಂಘಟನೆಯನ್ನು 5 ವರ್ಷಗಳ ಕಾಲ ನಿಷೇಧಿಸಿ ಆದೇಶ ಹೊರಡಿಸಿತ್ತು.

ಪಾಪ್ಯುಲರ್​ ಫ್ರಂಟ್​ ಆಫ್​ ಇಂಡಿಯಾ(ಪಿಎಫ್​ಐ) ಸಂಘಟನೆಗೆ ಕೇಂದ್ರ ಸರ್ಕಾರ ಅಂಕುಶ ಹಾಕಿದೆ. ಐದು ವರ್ಷಗಳ ಕಾಲ ಪಿಎಫ್​ಐ ಬ್ಯಾನ್​ ಮಾಡಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಮುಂದಿನ ಐದು ವರ್ಷಗಳವರೆಗೆ ನಿಷೇಧ ಹೇರಿದೆ.

ಸರ್ಕಾರದ ಅಧಿಸೂಚನೆಯಲ್ಲೇನಿದೆ.. PFI ಮತ್ತು ಅದರ ಅಂಗಸಂಸ್ಥೆಗಳು ಕಾನೂನುಬಾಹಿರ ಕೆಲಸಗಳಲ್ಲಿ ತೊಡಗಿಸಿಕೊಂಡಿವೆ. ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಪೂರ್ವಾಗ್ರಹ ಚಟುವಟಿಕೆಗಳು ಮತ್ತು ಸಾರ್ವಜನಿಕ ಶಾಂತಿ ಮತ್ತು ದೇಶದ ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ದೇಶದಲ್ಲಿ ಉಗ್ರತ್ವವನ್ನು ಬೆಂಬಲಿಸುವ ಕೆಲಸವನ್ನು ಮಾಡುತ್ತಿವೆ. ಸಮಾಜದ ಒಂದು ವಿಭಾಗವು ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ದುರ್ಬಲಗೊಳಿಸಲು ಕೆಲಸ ಮಾಡುತ್ತಿದೆ ಮತ್ತು ದೇಶದ ಸಾಂವಿಧಾನಿಕ ಅಧಿಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳಿಗೆ ಸಂಪೂರ್ಣ ಅಗೌರವವನ್ನು ತೋರಿಸುತ್ತದೆ ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಿದೆ.

ಪಿಎಫ್​ಐನ ಅಂಗ ಸಂಸ್ಥೆಗಳಿಗೂ ಶಾಕ್​.. PFIನ ಕೆಲವು ಸಂಸ್ಥಾಪಕ ಸದಸ್ಯರು ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI) ನಾಯಕರು ಮತ್ತು PFI ಜಮಾತ್-ಉಲ್-ಮುಜಾಹಿದ್ದೀನ್​ ಬಾಂಗ್ಲಾದೇಶ (JMB) ನೊಂದಿಗೆ ಸಂಪರ್ಕವನ್ನು ಹೊಂದಿದೆ. ಇವೆರಡೂ ನಿಷೇಧಿತ ಸಂಘಟನೆಗಳಾಗಿವೆ ಎಂದು ಕೇಂದ್ರವು ತನ್ನ ಅಧಿಸೂಚನೆಯಲ್ಲಿ ಹೇಳಿದೆ.

ಜಾಗತಿಕವಾಗಿ PFI ಅಂತಾರಾಷ್ಟ್ರೀಯ ಸಂಪರ್ಕಗಳ ಹಲವಾರು ನಿದರ್ಶನಗಳಿವೆ. ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳು ದೇಶದಲ್ಲಿ ಅಭದ್ರತೆಯ ಭಾವನೆಯನ್ನು ಉತ್ತೇಜಿಸುವ ಮೂಲಕ ಒಂದು ಸಮುದಾಯದ ಮೂಲಭೂತೀಕರಣವನ್ನು ಹೆಚ್ಚಿಸಲು ರಹಸ್ಯವಾಗಿ ಕೆಲಸ ಮಾಡುತ್ತಿವೆ. ಕೆಲವು ಪಿಎಫ್‌ಐ ಕಾರ್ಯಕರ್ತರು ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ್ದಾರೆ ಎಂಬುದು ಸಾಬೀತಾಗಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಕೇಂದ್ರ ಸರ್ಕಾರ ಮೇಲಿನ ಸಂದರ್ಭಗಳನ್ನು ಪರಿಗಣಿಸಿ PFI ಮತ್ತು ಅದರ ಅಂಗಸಂಸ್ಥೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾನೂನುಬಾಹಿರ ಸಂಘವೆಂದು ಘೋಷಿಸುವುದು ಅವಶ್ಯಕ ಎಂದು ಈ ನಿರ್ಧಾರವನ್ನು ಕೈಗೊಂಡಿದೆ. ಅದರ ಪ್ರಕಾರ ಸದರಿ ಅಧಿನಿಯಮದ ಸೆಕ್ಷನ್ 3 ರ ಉಪ-ವಿಭಾಗ (3) ಕ್ಕೆ ನಿಬಂಧನೆಯಿಂದ ನೀಡಲಾದ ಅಧಿಕಾರಗಳನ್ನು ಚಲಾಯಿಸುವಾಗ ಈ ಅಧಿಸೂಚನೆಯನ್ನು ಕೇಂದ್ರ ಸರ್ಕಾರವು ಈ ಮೂಲಕ ನಿರ್ದೇಶಿಸುತ್ತದೆ. ಸದರಿ ಕಾಯ್ದೆಯ ಸೆಕ್ಷನ್ 4 ರ ಅಡಿಯಲ್ಲಿ ಮಾಡಬಹುದಾದ ಯಾವುದೇ ಆದೇಶಕ್ಕೆ ಒಳಪಟ್ಟಿರುತ್ತದೆ. ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಿದ ದಿನಾಂಕದಿಂದ ಐದು ವರ್ಷಗಳ ಅವಧಿಗೆ ಅನ್ವಯಿಸುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಓದಿ: ಭಾರತದ ಔಷಧ ಸೇವಿಸಿ ಉಜ್ಬೇಕಿಸ್ತಾನದಲ್ಲಿ 18 ಮಕ್ಕಳು ಸಾವು: ಆರೋಪ

Last Updated : Dec 29, 2022, 1:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.