ನವದೆಹಲಿ: ಭಯೋತ್ಪಾದನೆಗೆ ಆರ್ಥಿಕ ಸಹಾಯ ಮಾಡಿರುವ ಪ್ರಕರಣದಲ್ಲಿ ಕಾಶ್ಮೀರದ ಪ್ರತ್ಯೇಕತಾವಾದಿ ಹೋರಾಟಗಾರ ಯಾಸೀನ್ ಮಲಿಕ್ ದೋಷಿ ಎಂದು ಈಗಾಗಲೇ ಎನ್‌ಐಎ ಕೋರ್ಟ್ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಿದೆ. ಯಾಸಿನ್ ಮಲಿಕ್‌ಗೆ ಮರಣದಂಡನೆ ವಿಧಿಸುವಂತೆ ಎನ್‌ಐಎ ವಿಶೇಷ ಕೋರ್ಟ್ನ ನ್ಯಾಯಾಧೀಶ ಪ್ರವೀಣ್ ಸಿಂಗ್ ಅವರಿಗೆ ಮನವಿ ಸಲ್ಲಿಕೆ ಮಾಡಲಾಗಿತ್ತು. ಇದರ ಬಗ್ಗೆ ವಿಚಾರಣೆ ನಡೆಸಿದ ದೆಹಲಿ ಎನ್‌ಐಎ ಕೋರ್ಟ್, ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇದರ ಬೆನ್ನಲ್ಲೇ ಶಿವಸೇನೆ ಸಂಭ್ರಮಾಚರಣೆ ಮಾಡಿದ್ದು, ಯಾಸಿನ್ ಮಲಿಕ್ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಯಾಸಿನ್ ಮಲಿಕ್ 2019ರಿಂದಲೂ ದೆಹಲಿಯ ತಿಹಾರ್ ಜೈಲಿನಲ್ಲಿದ್ದು, ಅವರ ವಿರುದ್ಧ ಯುಎಪಿಎ ಕಾಯ್ದೆಯ ಸೆಕ್ಷನ್ 16 (ಭಯೋತ್ಪಾದನಾ ಕೃತ್ಯ), ಭಯೋತ್ಪಾದನಾ ಚಟುವಟಿಕೆಗೆ ಹಣಕಾಸು ಸಂಗ್ರಹ), ಭಯೋತ್ಪಾದನಾ ಕೃತ್ಯ ಎಸಗಲು ಸಂಚು ಮತ್ತು ಭಯೋತ್ಪಾದನಾ ಗುಂಪು ಅಥವಾ ಸಂಘಟನೆಯ ಸದಸ್ಯನಾಗಿರುವುದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-B (ಅಪರಾಧ ಸಂಚು) ಮತ್ತು 124-A (ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಲಾಗಿದೆ. ತಮ್ಮ ಮೇಲೆ ದಾಖಲಾದ ಆರೋಪಗಳ ಸಂಬಂಧ ಮೇ 10 ರಂದು ಕೋರ್ಟ್‍ನಲ್ಲಿ ಮಲ್ಲಿಕ್ ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ದೋಷಿ ಎಂದು ಪ್ರಕಟಿಸಲಾಗಿತ್ತು.
-
#WATCH | Terror funding case: Yasin Malik produced in the courtroom in NIA court, Delhi, ahead of the sentencing order. pic.twitter.com/ymfkN6PK4d
— ANI (@ANI) May 25, 2022 " class="align-text-top noRightClick twitterSection" data="
">#WATCH | Terror funding case: Yasin Malik produced in the courtroom in NIA court, Delhi, ahead of the sentencing order. pic.twitter.com/ymfkN6PK4d
— ANI (@ANI) May 25, 2022#WATCH | Terror funding case: Yasin Malik produced in the courtroom in NIA court, Delhi, ahead of the sentencing order. pic.twitter.com/ymfkN6PK4d
— ANI (@ANI) May 25, 2022
ಯಾಸಿನ್ ಮಲಿಕ್ ವಿರುದ್ಧ 2017ರಲ್ಲಿ ಕಾಶ್ಮೀರ ಕಣಿವೆಯಲ್ಲಿ ನಡೆದ ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದ ಚಟುವಟಿಕೆಯ ಆರೋಪಕ್ಕೆ ಸಂಬಂಧಿಸಿದಂತೆ ಈ ಪ್ರಕರಣ ದಾಖಲಾಗಿದೆ. ಈಗಾಗಲೇ ಅವರನ್ನ ಕೋರ್ಟ್ಗೆ ಕರೆತರಲಾಗಿದೆ.
ಶ್ರೀನಗರ- ಯಾಸಿನ್ ಮಲಿಕ್ ನಿವಾಸದೆದುರು ಪ್ರತಿಭಟನೆ: ಎಎನ್ಐ ಕೋರ್ಟ್ನಿಂದ ಮಹತ್ವದ ತೀರ್ಪು ಹೊರಬೀಳಲು ಕ್ಷಣಗಣನೆ ಆರಂಭಗೊಂಡಿರುವ ಬೆನ್ನಲ್ಲೇ ಅವರ ಶ್ರೀನಗರದ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುತ್ತಿದ್ದು, ಕಲ್ಲು ತೂರಾಟ ಸಹ ನಡೆಸಲಾಗಿದೆ. ಯಾಸಿನ್ ಮಲಿಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಗೊಳ್ಳಲಿರುವ ಕಾರಣ ಶ್ರೀನಗರದಲ್ಲಿ ಬಂದ್ ವಾತಾವರಣ ನಿರ್ಮಾಣಗೊಂಡಿದ್ದು, ಕೆಲ ಅಂಗಡಿ ಮುಚ್ಚಲಾಗಿದ್ದು, ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗಿದೆ.
ಹಿಂಸಾಚಾರ ನಿಯಂತ್ರಣಕ್ಕೆ ಲಾಠಿ ಚಾರ್ಜ್: ಈ ನಡುವೆ ಯಾಸಿನ್ ಮಲೀಕ್ ಪರ ಬೆಂಬಲಿಗರಿಂದ ಶ್ರೀನಗರದಲ್ಲಿ ಹಿಂಸಾಚಾರ ಆರಂಭವಾಗಿದ್ದು, ಕಲ್ಲು ತೂರಾಟ ನಡೆದಿದೆ. ಉದ್ರಿಕ್ತರ ಗುಂಪನ್ನು ಚದುರಿಸಲು ಜಮ್ಮು - ಕಾಶ್ಮೀರ ಪೊಲೀಸರು ಲಾಠಿ ಚಾರ್ಜ್ ನಡೆಸುತ್ತಿದ್ದಾರೆ.
ಶಿವಸೇನೆಯಿಂದ ಸಂಭ್ರಮಾಚರಣೆ: ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ ಪ್ರಕಟಗೊಳ್ಳುತ್ತಿದ್ದಂತೆ ಶಿವಸೇನೆ ಸಂಭ್ರಮಾಚರಣೆ ಮಾಡಿದ್ದು, ಆತನ ಫೋಟೋ ಹಿಡಿದು, ಆಕ್ರೋಶ ವ್ಯಕ್ತಪಡಿಸಿದರು.