ETV Bharat / bharat

ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಬೆಳ್ಳಂಬೆಳಗ್ಗೆ 60ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ - Etv bharat kannada

ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ದೇಶಾದ್ಯಂತ ಶೋಧ ಕಾರ್ಯಾಚರಣೆ ನಡೆಸುತ್ತಿದೆ.

Sudhu Moose Wala murder
Sudhu Moose Wala murder
author img

By

Published : Sep 12, 2022, 9:44 AM IST

Updated : Sep 12, 2022, 11:34 AM IST

ನವದೆಹಲಿ: ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ಇಂದು ಬೆಳ್ಳಂಬೆಳಗ್ಗೆ ದೇಶಾದ್ಯಂತ 60ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸುತ್ತಿದೆ. ಮುಖ್ಯವಾಗಿ ಹರಿಯಾಣ, ಪಂಜಾಬ್​, ರಾಜಸ್ಥಾನ, ದೆಹಲಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಶೋಧ ಪ್ರಗತಿಯಲ್ಲಿದೆ.

ಮುಖ್ಯವಾಗಿ, ಹತ್ಯೆಯ ಪ್ರಮುಖ ಆರೋಪಿಗಳಾದ ಲಾರೆನ್ಸ್​ ಬಿಷ್ಣೋಯ್​, ಗೋಲ್ಡೀ ಬ್ರಾರ್​​ ಅವರಿಗೆ ಸೇರಿರುವ ಅನೇಕ ಸ್ಥಳಗಳಿಗೆ ತನಿಖಾಧಿಕಾರಿಗಳು ತೆರಳಿದ್ದಾರೆ. ಸಿಧು ಮೊಸೆ ವಾಲಾ ಹತ್ಯೆ ಪ್ರಕರಣದಲ್ಲಿ ಭೂಗತ ಲೋಕದ ದುಷ್ಕರ್ಮಿಗಳ ಪಾತ್ರದ ಬಗ್ಗೆ ಮಾಹಿತಿ ಕಲೆ ಹಾಕಲಾಗ್ತಿದೆ.

  • National Investigation Agency (NIA) raids are underway at various places in Delhi-NCR, Haryana and Punjab in connection with suspected terror gangs linked to the killing of Punjabi singer Sidhu Moose Wala

    Visuals from Tajpur village in Delhi pic.twitter.com/Rrb6YHIKd0

    — ANI (@ANI) September 12, 2022 " class="align-text-top noRightClick twitterSection" data=" ">

ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗಿದ್ದ ಜನಪ್ರಿಯ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಕಳೆದ ಮೇ ತಿಂಗಳಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪಂಜಾಬ್​ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅವರು, ಆಮ್​ ಆದ್ಮಿ ಪಕ್ಷದ ಡಾ.ವಿಜಯ್​ ಸಿಂಗ್ಲಾ ವಿರುದ್ಧ ಸೋಲು ಕಂಡಿದ್ದರು. ಪಂಜಾಬ್​ ಸರ್ಕಾರ ಇವರಿಗೆ ನೀಡಿದ್ದ ಭದ್ರತೆ ವಾಪಸ್ ಪಡೆದುಕೊಂಡಿತ್ತು. ಇದರ ಬೆನ್ನಲ್ಲೇ ಮೂಸೆವಾಲಾ ಮೇಲೆ ಗುಂಡಿನ ದಾಳಿ ನಡೆಸಿ, ಕೊಲೆ ಮಾಡಲಾಗಿದೆ.

ದೇಶದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಕ್ರಿಮಿನಲ್ ಗ್ಯಾಂಗ್​​​ಗಳನ್ನು ಹತ್ತಿಕ್ಕುವ ಉದ್ದೇಶದಿಂದಲೂ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಮುಖ್ಯವಾಗಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮತ್ತು ನೀರಜ್ ಬವಾನಾ ಗ್ಯಾಂಗ್‌ಗೆ ಸೇರಿದ 10 ಆರೋಪಿಗಳ ವಿರುದ್ಧ ಎನ್‌ಐಎ ಪ್ರಕರಣ ದಾಖಲಿಸಿಕೊಂಡಿದ್ದು, ಇದೀಗ ಅವರನ್ನು ಬಂಧಿಸುವ ಉದ್ದೇಶದಿಂದ ಏಕಕಾಲಕ್ಕೆ ಕಾರ್ಯಾಚರಣೆ ನಡೆಯುತ್ತಿದೆ.

  • गुजरात की जनता से मिल रहे अपार समर्थन से भाजपा बुरी तरह बौखला गयी है। “आप” के पक्ष में गुजरात में आँधी चल रही है

    दिल्ली के बाद अब गुजरात में भी रेड करनी शुरू कर दी। दिल्ली में कुछ नहीं मिला, गुजरात में भी कुछ नहीं मिला

    हम कट्टर ईमानदार और देशभक्त लोग हैं https://t.co/GBu1ddoSIY

    — Arvind Kejriwal (@ArvindKejriwal) September 11, 2022 " '="" class="align-text-top noRightClick twitterSection" data=" ">

ಇದನ್ನೂ ಓದಿ: ಮೂಸೆವಾಲಾ ಹತ್ಯೆ ಪ್ರಕರಣ : ಕೊಲೆಗೆ ಬಳಸಿದ್ದ ಶಸ್ತ್ರಾಸ್ತ್ರ ವಶ

ಅಹಮದಾಬಾದ್​ AAP ಕಚೇರಿ ಮೇಲೆ ಪೊಲೀಸ್ ದಾಳಿ: ಗುಜರಾತ್​ನ ಅಹಮದಾಬಾದ್​​ನಲ್ಲಿರುವ ಆಮ್​ ಆದ್ಮಿ ಪಕ್ಷದ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾಗಿ ವರದಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್​ ಟ್ವೀಟ್ ಮಾಡಿದ್ದು, ದೆಹಲಿ ನಂತರ ಇದೀಗ ಗುಜರಾತ್​​ನಲ್ಲೂ ದಾಳಿ ಮಾಡುವ ಕಾರ್ಯ ಶುರುವಾಗಿದೆ. ದೆಹಲಿಯಲ್ಲೂ ಏನೂ ಸಿಗಲಿಲ್ಲ. ಗುಜರಾತ್​​ನಲ್ಲೂ ಏನೂ ಸಿಕ್ಕಿಲ್ಲ ಎಂದು ಬರೆದುಕೊಂಡಿದ್ದಾರೆ. ಮುಂದಿನ ಕೆಲ ದಿನಗಳಲ್ಲಿ ಗುಜರಾತ್​ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಎಎಪಿ ಭರ್ಜರಿ ಪ್ರಚಾರ ನಡೆಸುತ್ತಿದೆ.

Last Updated : Sep 12, 2022, 11:34 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.