ನವದೆಹಲಿ: ಲಷ್ಕರ್-ಎ-ತೊಯ್ಬಾ ಮತ್ತು ಹಿಜ್ಬ್-ಉಲ್-ಮುಜಾಹಿದ್ದೀನ್ ಮತ್ತು ಇತರ ಭಯೋತ್ಪಾದಕ ಗುಂಪುಗಳನ್ನೊಳಗೊಂಡಿರುವ ಭಯೋತ್ಪಾದಕ ನಿಧಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ಐಎ ಜಮ್ಮು ಮತ್ತು ಕಾಶ್ಮೀರದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಮತ್ತು ಪುಲ್ವಾಮಾ ಜಿಲ್ಲೆಗಳು ಹಾಗೂ ಉತ್ತರ ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಹಾಗೂ ಜಮ್ಮುವಿನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ವರದಿಯಾಗಿದೆ. ಈ ಸಂಬಂಧ ಎನ್ಐಎ ಒಬ್ಬ ವ್ಯಕ್ತಿಯನ್ನು ಬಂಧಿಸಿದೆ.
ಇದೊಂದು ಭಯೋತ್ಪಾದಕ ನಿಧಿ ಪ್ರಕರಣವಾಗಿದ್ದು, ಅನೇಕ ಭಯೋತ್ಪಾದಕ ಗುಂಪುಗಳಾದ ಲಷ್ಕರ್-ಎ-ತೈಬಾ ಮತ್ತು ಹಿಜ್ಬ್-ಉಲ್-ಮುಜಾಹಿದ್ದೀನ್ ವಿರುದ್ಧ ನಾವು ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಎನ್ಐಎ ಮೂಲಗಳು ಹೇಳಿವೆ. ಈ ಹಿಂದೆ ಎನ್ಐಎ ಹಲವು ಎಫ್ಐಆರ್ಗಳನ್ನು ದಾಖಲಿಸಿತ್ತು. ಈ ಎಲ್ಲ ಎಫ್ಐಆರ್ಗಳ ಆಧಾರದ ಮೇಲೆ ಈ ದಾಳಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನು ಓದಿ:ನಕಲಿ ಛಾಪಾ ಕಾಗದ ಹಗರಣ: ವೆಬ್ ಸರಣಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ತೆಲಗಿ ಪುತ್ರಿ, ಇಂದು ವಿಚಾರಣೆ ಸಾಧ್ಯತೆ