ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಈವರೆಗೆ ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಸಿದ ಒಟ್ಟು 8 ಕಾರುಗಳನ್ನು ವಶಪಡಿಸಿಕೊಂಡಿದೆ.
ಸ್ಫೋಟಕ ಪತ್ತೆ ಪ್ರಕರಣ ಮತ್ತು ಮನ್ಸುಖ್ ಹಿರೇನ್ ಸಾವಿನ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮತ್ತು ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಮಾಲೀಕತ್ವದ ಕಾರುಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ಮುಂದುವರೆಸಲಾಗಿದೆ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.
ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಸಮೀಪ ಸ್ಫೋಟಕ ತುಂಬಿದ ವಾಹನ ಪತ್ತೆಯಾದ ಪ್ರಕರಣ ಮತ್ತು ಮನ್ಸುಖ್ ಹಿರೇನ್ ಸಾವಿನ ಹಿಂದೆ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಕೈವಾಡ ಇರುವುದು ದೃಢಪಟ್ಟಿದೆ. ಈ ಎರಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ಐಷಾರಾಮಿ ಕಾರುಗಳನ್ನು ಬಳಸಲಾಗಿದೆ. ಹಾಗಾಗಿ ಎನ್ಐಎ ಇದುವರೆಗೆ 8 ವಾಹನಗಳನ್ನು ವಶಪಡಿಸಿಕೊಂಡಿದೆ.
ಇದನ್ನೂ ಓದಿ: ಅಂಬಾನಿ ಮನೆ ಬಳಿ ಸ್ಫೋಟಕ ತುಂಬಿದ್ದ ಕಾರು ಪತ್ತೆ ಪ್ರಕರಣ: ಆರೋಪಿ ಬಗೆಗಿನ ಮತ್ತೊಂದು ಅಚ್ಚರಿ ವಿಡಿಯೋ ಲಭ್ಯ