ETV Bharat / bharat

ಮುಂದ್ರಾ ಬಂದರಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣ: ಅಮೆರಿಕ, ಇರಾನ್​, ಆಫ್ಘನ್​ಗೆ ಪತ್ರ ಬರೆಯಲಿರುವ ಎನ್​ಐಎ - ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಫ್ಘನ್​ಗೆ ಪತ್ರ

Mundra drug case: ಮುಂದ್ರಾ ಬಂದರಿನಲ್ಲಿ 21 ಸಾವಿರ ಕೋಟಿ ಮೌಲ್ಯದ 2,988.21 ಕೆ.ಜಿ ಹೆರಾಯಿನ್ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಮೆರಿಕ, ಇರಾನ್ ಮತ್ತು ಅಫ್ಘಾನಿಸ್ತಾನ ಸರ್ಕಾರಕ್ಕೆ ಪತ್ರ ಬರೆಯುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

NIA to write letter to US, Iran and Afghanistan over Mundra drug seizure case
ಮುಂದ್ರಾ ಬಂದರಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣ: ಅಮೆರಿಕ, ಇರಾನ್​, ಆಫ್ಘನ್​ಗೆ ಪತ್ರ ಬರೆಯಲಿರುವ ಎನ್​ಐಎ
author img

By

Published : Dec 15, 2021, 7:19 AM IST

ನವದೆಹಲಿ: ಗುಜರಾತ್​ನ ಮುಂದ್ರಾ ಬಂದರಿನಲ್ಲಿ ಮಾದಕ ವಸ್ತು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ಅಮೆರಿಕ, ಇರಾನ್ ಮತ್ತು ಅಫ್ಘಾನಿಸ್ತಾನ ಸರ್ಕಾರಕ್ಕೆ ಪತ್ರ ಬರೆಯುವ ಸಾಧ್ಯತೆಯಿದೆ ಎಂದು ಎನ್​ಐಎ ಅಧಿಕಾರಿಗಳು 'ಈಟಿವಿ ಭಾರತ'​ಗೆ ಮಾಹಿತಿ ನೀಡಿದ್ದಾರೆ.

ಈ ಮೂರು ದೇಶಗಳೊಂದಿಗೆ ಸಂಪರ್ಕ ಸಾಧಿಸುವ ಮೂಲಕ ದೇಶದಲ್ಲಿ ಪತ್ತೆಯಾದ ಅತಿದೊಡ್ಡ ಮಾದಕ ವಸ್ತು ಕಳ್ಳ ಸಾಗಣೆ ಎಂದು ಭಾವಿಸಲಾದ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲಾಗುವುದು ಎಂದು ಎನ್​ಐಎ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಅಕ್ಟೋಬರ್‌ನಲ್ಲಿ ಆದಾಯ ಗುಪ್ತಚರ ನಿರ್ದೇಶನಾಲಯವು ಗುಜರಾತ್‌ನ ಮುಂದ್ರಾ ಬಂದರಿನಲ್ಲಿ 21 ಸಾವಿರ ಕೋಟಿ ಮೌಲ್ಯದ 2,988.21 ಕೆ.ಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿತ್ತು. ನಂತರ ಪ್ರಕರಣವನ್ನು ಎನ್‌ಐಎ ಕೈಗೆತ್ತಿಕೊಂಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ದೆಹಲಿಯ ನೆಬ್ ಸರಾಯ್​ನಲ್ಲಿ ಅಫ್ಘಾನಿಸ್ತಾನದ ಪ್ರಜೆಯಾದ ಶೋಭಾನ್ ಆರ್ಯನ್ಫರ್ ಎಂಬ ವ್ಯಕ್ತಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಎನ್​ಐಎ ಮೂಲಗಳು ತಿಳಿಸಿವೆ. ಈ ವ್ಯಕ್ತಿಯು ಟಾಲ್ಕ್​ ಕಲ್ಲುಗಳಲ್ಲಿ ಮಾದಕವಸ್ತುವನ್ನು ಇಟ್ಟು ಸಾಗಿಸುವ ಸಂಚಿನಲ್ಲಿ ಭಾಗಿಯಾಗಿದ್ದನು ಎಂದು ತಿಳಿದುಬಂದಿದೆ.

ಈ ಹಿಂದೆಯೇ ನಾಲ್ವರು ಅಫ್ಘಾನಿಸ್ತಾನ ಪ್ರಜೆಗಳು ಸೇರಿದಂತೆ 7 ಜನರನ್ನು ಎನ್‌ಐಎ ಬಂಧಿಸಿತ್ತು. ಎನ್‌ಐಎ ದೆಹಲಿ, ಹರಿಯಾಣ, ಗುರ್‌ಗಾಂವ್ ಮತ್ತು ಇತರ ಸ್ಥಳಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ನಡೆಸಿತ್ತು.

ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್​ಸ್ಟೆನ್​​ ಆ್ಯಕ್ಟ್ ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಸ್​ಪಿಎಸ್​) ಸೆಕ್ಷನ್​ಗಳ ಅಡಿಯಲ್ಲಿ ದೂರುಗಳನ್ನು ದಾಖಲಿಸಿಕೊಳ್ಳಲಾಗಿದೆ. ಮಾದಕ ವಸ್ತುವಿದ್ದ ಹಡಗು ಅಫ್ಘಾನಿಸ್ತಾನದ ಕಂದಹಾರ್‌ನಿಂದ ಇರಾನ್‌ನ ಅಬ್ಬಾಸ್ ಬಂದರಿನ ಮೂಲಕ ಮುಂದ್ರಾ ಬಂದರಿಗೆ ಆಗಮಿಸಿತ್ತು ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ: 2 ದಿನ - ಎಂಟು ಸ್ಥಳಗಳಲ್ಲಿ ಎನ್​ಸಿಬಿ ದಾಳಿ: 3 ಕೋಟಿ ಮೌಲ್ಯದ ಮಾದಕ ದ್ರವ್ಯ ವಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.