ಮುಂಬೈ(ಮಹಾರಾಷ್ಟ್ರ): ಮಹಾರಾಷ್ಟ್ರದ ಬಾಂದ್ರಾದಲ್ಲಿ ಬುಧವಾರದಂದು ಬಹುಮಹಡಿ ಕಟ್ಟಡ ಕುಸಿದ ಪರಿಣಾಮ ಒಂಬತ್ತು ಜನರು ಗಾಯಗೊಂಡಿದ್ದಾರೆ.
ಬಾಂದ್ರಾದ ಬೆಹ್ರಾಮ್ ನಗರದಲ್ಲಿ ನಿನ್ನೆ ಮಧ್ಯಾಹ್ನ 3.50ರ ಸುಮಾರಿಗೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದೆ. ಘಟನೆಯಲ್ಲಿ ಮೂವರು ಹದಿಹರೆಯದ ಹುಡುಗಿಯರು, ಹಿರಿಯ ನಾಗರಿಕರು ಸೇರಿ ಒಂಬತ್ತು ಮಂದಿ ಗಾಯಗೊಂಡಿದ್ದಾರೆಂದು ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ ಸಂಭವಿಸಿದ ಕೂಡಲೇ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳಿಯ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಇತರರು ಸ್ಥಿರವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಮೂವರು ಮಕ್ಕಳೊಂದಿಗೆ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಶರಣಾದ ತಾಯಿ
6 ಆ್ಯಂಬುಲೆನ್ಸ್ಗಳು, 5 ಅಗ್ನಿಶಾಮಕ ವಾಹನಗಳು ಮತ್ತು ಒಂದು ರಕ್ಷಣಾ ವ್ಯಾನ್ ಅನ್ನು ಅಪಘಾತದ ಸ್ಥಳಕ್ಕೆ ಕಳುಹಿಸಿ, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ