ETV Bharat / bharat

ಮೂರು ಪ್ರತ್ಯೇಕ ರಸ್ತೆ ಅಪಘಾತ: 9 ಮಂದಿ ಬಲಿ

ಗುಜರಾತ್, ಛತ್ತೀಸ್​ಗಢ ಮತ್ತು ಉತ್ತರ ಪ್ರದೇಶದಲ್ಲಿ ನಡೆದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 9 ಜನರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

Etv Bharat
Etv Bharat
author img

By ETV Bharat Karnataka Team

Published : Oct 27, 2023, 2:28 PM IST

ನವದೆಹಲಿ: ಗುಜರಾತ್​ ಸೇರಿ ದೇಶದ ಮೂರು ಕಡೆಗಳಲ್ಲಿ ಗುರುವಾರ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಗುಜರಾತ್​ನಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರೆ, ಛತ್ತೀಸ್​ಗಢದಲ್ಲಿ ಮೂವರು ಹಾಗೂ ಉತ್ತರ ಪ್ರದೇಶದಲ್ಲಿ ಇಬ್ಬರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಗುಜರಾತ್​ನ ಬನಸ್ಕಾಂತ ಜಿಲ್ಲೆಯಲ್ಲಿ ಗುರುವಾರ ಸಂಜೆ ಟ್ರಕ್ ಮತ್ತು ಕಾರಿನ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ಘಟನೆಯಲ್ಲಿ ಎರಡು ವರ್ಷದ ಬಾಲಕಿ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಭೂಪತಭಾಯ್ ಸಾವಭಾಯಿ ಮಾಲಿ (45), ಭಿಖಾಭಾಯಿ ಶಂಕರಭಾಯಿ ಮಾಲಿ (40), ಮೋತಿಭಾಯಿ ಕರ್ಶನ್‌ಭಾಯ್ ಮಾಲಿ (17) ಹಾಗೂ ಎರಡು ವರ್ಷದ ಮೃತರೆಂದು ಗುರುತಿಸಲಾಗಿದೆ.

ಒಂದೇ ಕುಟುಂಬದ ಈ ನಾಲ್ವರು ತಮ್ಮ ಬ್ರೆಜ್ಜಾ ಕಾರಿನಲ್ಲಿ ಭಾಭರ್ ತಾಲೂಕಿನ ಗೋಸನ್ ಮಾರ್ಗವಾಗಿ ಧನನ ಗ್ರಾಮಕ್ಕೆ ತೆರಳುತ್ತಿದ್ದರು. ಇದೇ ವೇಳೆ ಕಾರು ಹಾಗೂ ಟ್ರಕ್​ ನಡುವೆ ಡಿಕ್ಕಿ ಸಂಭವಿಸಿದೆ. ಇದರ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಯ ಕಂಡು ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ ತಕ್ಷಣವೇ 108 ಆ್ಯಂಬುಲೆನ್ಸ್ ಹಾಗೂ ಪೊಲೀಸರಿಗೆ ಕರೆ ಮಾಡಿದ್ದಾರೆ.

ಈ ವಿಷಯ ತಿಳಿದ ಭಾಭರ್ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಎಲ್ಲರನ್ನೂ ಆ್ಯಂಬುಲೆನ್ಸ್ ಸಹಾಯದಿಂದ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಅಷ್ಟರಲ್ಲೇ ಇಬ್ಬರು ಮೃತಪಟ್ಟಿರುವುದು ದೃಢಪಟ್ಟಿದ್ದು, ಚಿಕಿತ್ಸೆ ವೇಳೆ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿದ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಮೂವರು ಸಾವು: ಮತ್ತೊಂದೆಡೆ, ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಕಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ಮೃತರನ್ನು ಛತ್ರಪಾಲ್ (21), ಗೀತೇಶ್ ದರ್ರೋ (22) ಮತ್ತು ಚುನೇಶ್ವರ್ (21) ಎಂದು ಗುರುತಿಸಲಾಗಿದೆ. ದೊಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ದೊಂಡಿ-ಭಾನುಪ್ರತಾಪುರ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ಮೂವರು ಯುವಕರು ದೋಂಡಿಯಿಂದ ತಮ್ಮ ಗ್ರಾಮವಾದ ಜುರಹತೋಲಾಕ್ಕೆ ಬೈಕ್​ನಲ್ಲಿ ಹೋಗುತ್ತಿದ್ದರು. ಈ ವೇಳೆ ಕಾರಿಗೆ ಬೈಕ್​ ಡಿಕ್ಕಿ ಹೊಡೆದಿದೆ. ಇದರಿಂದ ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಆದರೆ, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆ ಇಬ್ಬರು ಸಹ ಮೃತಪಟ್ಟಿದ್ದಾರೆ. ಈ ಘಟನೆ ನಂತರ ಕಾರು ಚಾಲಕ ತನ್ನ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಕಾರು ಚಾಲಕನ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಇಬ್ಬರು ಸಾವು: ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇಲ್ಲಿನ ತಿಗ್ರಿ ಗ್ರಾಮದ ಬಳಿ ಪಿಕ್‌ಅಪ್ ವಾಹನವೊಂದು ಬೈಕ್​ಗೆ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ. ಒಂದೇ ಬೈಕ್​ನಲ್ಲಿ ಮೂವರು ಗುರುವಾರ ರಾತ್ರಿ ಖತೌಲಿಯಿಂದ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ, ಘಟನೆ ಸಂಭವಿಸಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಸರ್ಕಲ್ ಪೊಲೀಸ್​ ಆಫೀಸರ್ ರವಿಶಂಕರ್ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ್: ಆದಿ ಕೈಲಾಸದಿಂದ ಬರುತ್ತಿದ್ದಾಗ ಕಂದಕಕ್ಕೆ ಬಿದ್ದ ವಾಹನ.. ಕರ್ನಾಟಕದ ನಾಲ್ವರು ಸೇರಿ ಆರು ಜನ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.