ನವದೆಹಲಿ: ರಾಜ್ಯಸಭೆಯಲ್ಲಿ ಕೇಂದ್ರ ಬಜೆಟ್ ಕುರಿತ ಚರ್ಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಉತ್ತರಿಸಲಿದ್ದಾರೆ.
2021-22ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ಫೆಬ್ರವರಿ 1 ರಂದು ಲೋಕಸಭೆಯಲ್ಲಿ ಮಂಡಿಸಿದ್ದರು. ಮೊಟ್ಟಮೊದಲ ಡಿಜಿಟಲ್ ಯೂನಿಯನ್ ಬಜೆಟ್ ಅನ್ನು ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ತಿಂಗಳ ಆರಂಭದಲ್ಲಿ ಕೋವಿಡ್ -19 ವಿರುದ್ಧ ಭಾರತದ ಹೋರಾಟವು 2021 ರವರೆಗೆ ಮುಂದುವರೆದಿದೆ ಎಂದು ಹೇಳಿದ್ದರು.
ಇದನ್ನು ಓದಿ: ಸ್ವದೇಶಿ 'ಕೂ' ಆ್ಯಪ್ ಬಳಕೆಗೆ ಮುಂದಾದ ಸರ್ಕಾರಿ ಇಲಾಖೆಗಳು
ಬಜೆಟ್ ಅಧಿವೇಶನದ ಮೊದಲ ಭಾಗ ಫೆಬ್ರವರಿ 13 ರಂದು ಮುಕ್ತಾಯಗೊಳ್ಳಲಿದೆ.