ETV Bharat / bharat

ಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಬಂದವು ಮೂರು ಬೆದರಿಕೆ ಕರೆಗಳು: ಪೊಲೀಸ್​ ಭದ್ರತೆ ಹೆಚ್ಚಳ - ಮಹಾರಾಷ್ಟ್ರದ ನಾಗ್ಪುರ

ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಮೂರು ಬೆದರಿಕೆ ಕರೆಗಳು ಬಂದಿದ್ದು, ಕಚೇರಿಗೆ ಪೊಲೀಸ್​ ಭದ್ರತೆಯನ್ನು ಹೆಚ್ಚಿಸಲಾಗಿದೆ.

Etv Bharat
Etv Bharat
author img

By

Published : Jan 14, 2023, 3:39 PM IST

Updated : Jan 14, 2023, 3:59 PM IST

ನಾಗ್ಪುರ (ಮಹಾರಾಷ್ಟ್ರ): ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಇಲಾಖೆಯ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಮೂರು ಬೆದರಿಕೆ ಕರೆಗಳು ಬಂದಿರುವ ಘಟನೆ ಶನಿವಾರ ನಡೆದಿದೆ. ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕಚೇರಿಗೆ ಈ ಬೆದರಿಕೆ ಕರೆಗಳು ಬಂದಿದ್ದು, ಹಣ ವಸೂಲಿಗಾಗಿ ಬೇಡಿಕೆ ಮತ್ತು ಕೊಲೆ ಬೆದರಿಕೆಯನ್ನೂ ಹಾಕಲಾಗಿದೆ ಎನ್ನಲಾಗಿದೆ. ಈ ವಿಷಯ ತಿಳಿದ ತಕ್ಷಣವೇ ನಾಗ್ಪುರ ಪೊಲೀಸರು ಕಚೇರಿಗೆ ಭದ್ರತೆ ಹೆಚ್ಚಿಸಿದ್ದಾರೆ.

ಬಿಜೆಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷರೂ ಆಗಿ ಗಡ್ಕರಿ ಅವರ ಕಚೇರಿಯ ಲ್ಯಾಂಡ್​ಲೈನ್​ ನಂಬರ್​ಗೆ ಅನಾಮಧೇಯ ವ್ಯಕ್ತಿಗಳು ಕರೆ ಮಾಡಿ ಹಣ ವಸೂಲಿಗಾಗಿ ಬೇಡಿಕೆ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕರೆಗಳನ್ನು ಸ್ವೀಕರಿಸಿದ ತಕ್ಷಣ ಕಚೇರಿಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಂತೆಯೇ, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುವುದೊಂದಿಗೆ ಹೆಚ್ಚಿನ ಭದ್ರತೆ ಕಲ್ಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಾಗ್ಪುರ ಡಿಸಿಪಿ ರಾಹುಲ್ ಮದನೆ, ಕೇಂದ್ರ ಸಚಿವ ಗಡ್ಕರಿ ಅವರ ಕಚೇರಿಯ ಲ್ಯಾಂಡ್​ಲೈನ್​ ನಂಬರ್​​ಗೆ ಇಂದು ಬೆಳಗ್ಗೆ 11.25, 11.32 ಮತ್ತು ಮಧ್ಯಾಹ್ನ 12.32ಕ್ಕೆ ಬಿಎಸ್‌ಎನ್‌ಎಲ್‌ನಿಂದ ಮೂರು ಕರೆಗಳು ಬಂದಿವೆ. ಈ ಕರೆಗಳ ವಿವರಗಳ ದಾಖಲೆ (CDR - Call Detail Record)ಗಳನ್ನು ಕಲೆ ಹಾಕಲಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ಅಪರಾಧ ವಿಭಾಗವು ಕಾರ್ಯೋನ್ಮುಖವಾಗಿದೆ. ಸಚಿವರ ಕಚೇರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮ ಸ್ಥಳದಲ್ಲೂ ಹೆಚ್ಚಿನ ಭದ್ರತೆ: ಸಚಿವ ನಿತಿನ್​ ಗಡ್ಕರಿ ಅವರು ಪ್ರಸ್ತುತ ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ನಾಗ್ಪುರದಲ್ಲೇ ಇದ್ದಾರೆ. ಒಂದು ದಿನದ ಹಿಂದೆ ಅವರು ಗ್ರೇಟರ್ ನೋಯ್ಡಾದಲ್ಲಿ ಆಟೋ ಎಕ್ಸ್​ಪೋ -2023ರ ಕಾರ್ಯಕ್ರಮ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸದ್ಯ ಬೆದರಿಕೆ ಕರೆಗಳು ಬಂದ ಕಾರಣದಿಂದಾಗಿ ನಾಗ್ಪುರದಲ್ಲಿ ಗಡ್ಕರಿ ಭಾಗವಹಿಸುವ ಕಾರ್ಯಕ್ರಮ ಸ್ಥಳದಲ್ಲೂ ಭದ್ರತೆ ಹೆಚ್ಚಿಸಲಾಗುವುದು ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.

ಹಿಂದೆ ಪ್ರಮುಖರಿಗೂ ಬಂದಿದ್ದ ಬೆದರಿಕೆ ಕರೆಗಳು: ಮಹಾರಾಷ್ಟ್ರದಲ್ಲಿ ಹಿಂದೆಯೂ ಹಲವು ಪ್ರಮುಖರಿಗೆ ಇಂತಹ ಬೆದರಿಕೆಗಳು ಬಂದಿರುವುದು ವರದಿಯಾಗಿತ್ತು. ಹಾಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಮಾಜಿ ಮುಖ್ಯಮಂತ್ರಿ, ಎನ್​ಸಿಪಿ ವರಿಷ್ಠ ಶರದ್​ ಪವಾರ್, ಖ್ಯಾತಿ ಉದ್ಯಮಿ ಮುಖೇಶ್​ ಅಂಬಾನಿ ಮತ್ತು ಕುಟುಂಬಕ್ಕೂ ಬೆದರಿಕೆ ಕರೆಗಳು ಬಂದಿದ್ದವು.

ಅದರಲ್ಲೂ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಕಳೆದ ಅಕ್ಟೋಬರ್​ನಲ್ಲಿ ಬಂದಿದ್ದ ಜೀವ ಬೆದರಿಕೆಯು ಸಾಕಷ್ಟು ಸಂಚಲನ ಮೂಡಿಸಿತ್ತು. ಯಾಕೆಂದರೆ, ಈ ಬೆದರಿಕೆ ಕರೆ ಬಂದ ನಂತರ ಏಕನಾಥ್​ ಜೀವಕ್ಕೆ ಅಪಾಯವಿದೆ ಎಂದು ಗುಪ್ತಚರ ಇಲಾಖೆ ಹೇಳಿತ್ತು. ಜೊತೆಗೆ ಆತ್ಮಾಹುತಿ ಸ್ಫೋಟ ಮಾಡಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದೂ ತಿಳಿಸಿತ್ತು. ಅಲ್ಲದೇ, ಇದಕ್ಕೂ ಒಂದು ತಿಂಗಳು ಮುಂಚೆಯೂ ಸಹ ಏಕನಾಥ್ ಅವರಿಗೆ ಕೊಲೆ ಬೆದರಿಕೆ ಪತ್ರ ಸಚಿವಾಲಯಕ್ಕೆ ಬಂದಿತ್ತು. ಈ ಹಿಂದೆ ಸಚಿವರಾಗಿದ್ದಾಗಲೂ ಏಕನಾಥ್ ಅವರನ್ನು ಹತ್ಯೆ ಮಾಡುವುದಾಗಿ ಮಾವೋವಾದಿಗಳು ಬೆದರಿಕೆ ಹಾಕಿದ್ದರು.

ಪವಾರ್​ಗೆ ಬೆದರಿಕೆ ಹಾಕಿ ಸಿಕ್ಕಿ ಬಿದ್ದಿದ್ದ ಆರೋಪಿ: ಕಳೆದ ಡಿಸೆಂಬರ್​ನಲ್ಲಿ ಹಿರಿಯ ರಾಜಕಾರಣಿ ಶರದ್​ ಪವಾರ್​ ಅವರಿಗೂ ಬೆದರಿಕೆ ಕರೆ ಬಂದಿತ್ತು. ಈ ಕರೆಯ ಜಾಡಿದು ಹೊರಟಿದ್ದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಇನ್ನು, ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಡಿಸ್​ಪ್ಲೇ ನಂಬರ್‌ಗೆ ಬೆದರಿಕೆ ಕರೆ ಮಾಡಿ, ಉದ್ಯಮಿ ಮುಖೇಶ್ ಅಂಬಾನಿ ಮತ್ತವರ ಕುಟುಂಬಕ್ಕೆ ಬೆದರಿಕೆ ಹಾಕಲಾಗಿತ್ತು. ಆಗ ಒಟ್ಟು 8 ಬೆದರಿಕೆ ಕರೆಗಳು ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಬಂದಿದ್ದವು.

ಇದನ್ನೂ ಓದಿ: ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್‌ಗೆ ಕೊಲೆ ಬೆದರಿಕೆ ಕರೆ

Last Updated : Jan 14, 2023, 3:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.