ಪಾಟ್ನಾ: ಪಾಟ್ನಾದಲ್ಲಿ ನಡೆದ ನೂತನ ಚುನಾಯಿತ ಶಾಸಕರ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ಮತ್ತೊಂದು ಬಾರಿಗೆ ಮುಖ್ಯಮಂತ್ರಿ ಆಗಿ ಆಯ್ಕೆ ಮಾಡಲಾಗಿದೆ. ಅವರು ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹೊಸದಾಗಿ ಚುನಾಯಿತರಾದ ಶಾಸಕರೊಂದಿಗೆ ಸಭೆ ನಡೆಸಲಾಗಿದ್ದು, ಬಿಹಾರ ಸರ್ಕಾರಕ್ಕೆ ನಾಯಕನನ್ನು ಆಯ್ಕೆ ಮಾಡಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್, ಬಿಹಾರ ಚುನಾವಣಾ ಉಸ್ತುವಾರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಭೂಪೇಂದ್ರ ಯಾದವ್ ಕೂಡ ಭಾಗವಹಿಸಿದ್ದರು. ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಹುದ್ದೆಗೆ ನಿತೀಶ್ ಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದೆ.
ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ನಿತೀಶ್ ಕುಮಾರ್, ನಾಳೆ ಮಧ್ಯಾಹ್ನದ ನಂತರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ತಿಳಿಸಿದ್ದಾರೆ.