ನವದೆಹಲಿ: ಬಿಹಾರ ಸಿಎಂ ನಿತೀಶ್ ಕುಮಾರ್ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಅವರು ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂದು ಮೂಲಗಳು ಈ ಟಿವಿ ಭಾರತ್ಗೆ ತಿಳಿಸಿವೆ. 2019 ರಲ್ಲಿ ಪ್ರಧಾನಿ ಮೋದಿ 2ನೇ ಅವಧಿಯ ಆಡಳಿತ ಪ್ರಾರಂಭಿಸಿದಾಗ ನಿತೀಶ್ ಕುಮಾರ್ ನಿರೀಕ್ಷೆಯ ಬಗ್ಗೆ ಭಿನ್ನಾಭಿಪ್ರಾಯದಿಂದಾಗಿ ಜನತಾದಳ ಒಕ್ಕೂಟ (ಜೆಡಿಯು) ಸಂಪುಟದಿಂದ ಹೊರಗುಳಿದಿತ್ತು.
ಬಿಹಾರ ಸಿಎಂ ನಿತೀಶ್ ಕುಮಾರ್ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗುವ ಸಾಧ್ಯತೆ ಬಗ್ಗೆ ನಡೆಯುತ್ತಿರುವ ಚರ್ಚೆಯು ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆ ಮಾಡಲಿದ್ದಾರೆಯೇ ಎಂಬ ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ. ಈ ನಡುವೆ ಅವರು ಖಾಸಗಿ ಭೇಟಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿತೀಶ್ ಕುಮಾರ್ ಅವರು ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಭೇಟಿಯಾಗಲಿದ್ದಾರೆ ಎಂಬ ಕುರಿತು ತಿಳಿದುಬಂದಿದೆ.
ಜೆಡಿಯು ಲೋಕಸಭೆಯಲ್ಲಿ 16 ಸಂಸದರನ್ನು ಹೊಂದಿದ್ದು, ಚಿರಾಗ್ ಪಾಸ್ವಾನ್ ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ)ದ ವಿಭಜನೆಯು ಕ್ಯಾಬಿನೆಟ್ ಹುದ್ದೆಯ ಭರವಸೆಯ ಸಂಬಂಧವನ್ನು ಹೊಂದಿದೆ ಎಂದು ಹೇಳಲಾಗಿದೆ.
ಎಲ್‌ಜೆಪಿ ವಿಭಜನೆಯಲ್ಲಿ ನಿತೀಶ್ ಕುಮಾರ್ ಮತ್ತು ಬಿಜೆಪಿ ವಹಿಸಿದ ಪಾತ್ರವು ಅನೇಕರಿಗೆ ಆಶ್ಚರ್ಯ ಉಂಟು ಮಾಡಿದೆ. ಚಿರಾಗ್ ಪಾಸ್ವಾನ್ ತಂದೆ ಮತ್ತು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನದಿಂದಾಗಿ ಖಾಲಿಯಾಗಿದ್ದ ಹುದ್ದೆಗೆ ಚಿರಾಗ್ ಪಾಸ್ವಾನ್‌ರನ್ನು ಬದಲಿಯಾಗಿ ಪರಿಗಣಿಸಲಾಗಿದೆ ಎಂದು ಕೂಡಾ ಹೇಳಲಾಗಿತ್ತು ಎನ್ನಲಾಗಿದೆ. ಆದರೆ ನಿತೀಶ್ ಕುಮಾರ್ ನಿರಾಕರಣೆ ಕ್ರಮವನ್ನು ತೆಗೆದುಕೊಂಡಿಲ್ಲ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.
ಓದಿ: ಜೂನ್ 24ರಂದು AICC, ರಾಜ್ಯ ಉಸ್ತುವಾರಿಗಳ ಸಭೆ ಕರೆದ ಸೋನಿಯಾ ಗಾಂಧಿ