ETV Bharat / bharat

ಶೇ 50 ರ ಮೀಸಲಾತಿ ಮಿತಿ ಹೆಚ್ಚಳ, ದೇಶಾದ್ಯಂತ ಜಾತಿ ಗಣತಿಗೆ ನಿತೀಶ್ ಕುಮಾರ್ ಒತ್ತಾಯ - IWS is adequate

''ಸುಪ್ರೀಂ ಕೋರ್ಟ್ ತೀರ್ಪು ಸರಿಯಾಗಿದೆ. ಎಸ್ಸಿ ಎಸ್ಟಿಗೆ ಜನಸಂಖ್ಯೆಗೆ ತಕ್ಕಂತೆ ಮೀಸಲಾತಿ ಸಿಗುತ್ತಿದೆ. ಆದರೆ ಹಿಂದುಳಿದ ವರ್ಗದವರಿಗೆ ಜನಸಂಖ್ಯೆಗೆ ಅನುಗುಣ ಮೀಸಲಾತಿ ಪಡೆಯಲು ಸಾಧ್ಯವಾಗುತ್ತಿಲ್ಲ. ಮೀಸಲಾತಿ ಶೇ. 50 ರ ಮಿತಿ ಹೆಚ್ಚಾಗಲಿ"- ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್.

Bihar CM Nitish Kumar
ಬಿಹಾರ ಸಿಎಂ ನಿತೀಶ್ ಕುಮಾರ್
author img

By

Published : Nov 9, 2022, 11:01 AM IST

ಪಾಟ್ನಾ: ಮುಂದುವರೆದ ಜಾತಿಗಳ ಆರ್ಥಿಕ ದುರ್ಬಲ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ಕಲ್ಪಿಸುವ ಸುಪ್ರೀಂ ಕೋರ್ಟ್‌ ತೀರ್ಪು ನ್ಯಾಯಯುತವಾಗಿದೆ. ಆದರೆ ಶೇ.50ರ ಮೀಸಲಾತಿ ಮಿತಿಯನ್ನು ಹೆಚ್ಚಿಸಬೇಕು. ದೇಶಾದ್ಯಂತ ಜಾತಿಗಣತಿ ನಡೆಸುವ ಜತೆಗೆ ಇನ್ನುಳಿದ ಜಾತಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಒತ್ತಾಯಿಸಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಎಸ್‌ಸಿ-ಎಸ್‌ಟಿ ವರ್ಗದ ಜನರು ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪಡೆಯುತ್ತಾರೆ. ಆದರೆ ಹಿಂದುಳಿದ ಮತ್ತು ಅತ್ಯಂತ ಹಿಂದುಳಿದ ವರ್ಗಗಳಿಗೆ ಸೇರಿದ ಜನರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗುತ್ತಿಲ್ಲ. ಬಿಹಾರದಲ್ಲಿ ಜಾತಿ ಗಣತಿ ನಡೆಸುತ್ತಿದ್ದು, ಆರ್ಥಿಕ ಸ್ಥಿತಿಗತಿ ಅಧ್ಯಯನ ಮಾಡಿ ಎಲ್ಲರಿಗೂ ಸಹಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ನಾವು ಬಿಹಾರದಲ್ಲಿ ಈಗಾಗಲೇ ಜಾತಿಗಣತಿ ಆಧಾರಿತ ಕ್ರಮ ಕೈಗೊಂಡಿದ್ದೇವೆ. ಇದನ್ನೂ ರಾಷ್ಟ್ರಮಟ್ಟದಲ್ಲಿಯೂ ಮುಂದುವರಿಸಬೇಕು. ಜಾತಿಗಣತಿ ವಿಷಯದ ಮರುಚಿಂತನೆ ನಡೆಯಬೇಕು ಎಂದು ಹೇಳಿದರು.

ಬಿಜೆಪಿ ವಕ್ತಾರ ಅರವಿಂದ್ ಕುಮಾರ್ ಸಿಂಗ್ ಪ್ರತಿಕ್ರಿಯಿಸಿ, "ಮುಖ್ಯಮಂತ್ರಿಗಳು ಮೇಲ್ಜಾತಿಯ ದುರ್ಬಲ ವರ್ಗದವರು ಶೇ.10 ಮೀಸಲಾತಿ ಪಡೆಯುವುದಕ್ಕೆ ಸ್ಪಷ್ಟವಾಗಿ ಅಸಮಾಧಾನ ಹೊಂದಿದ್ದಾರೆ. ಪ್ರಸ್ತುತ ಮಿತ್ರಪಕ್ಷ ಆರ್ ಜೆಡಿ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ" ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಡಿವೈ ಚಂದ್ರಚೂಡ್ ಪ್ರಮಾಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.