ನವದೆಹಲಿ: ಆಕ್ಸಿಜನ್ ಕಾನ್ಸಂಟ್ರೇಟರ್ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟ ಪ್ರಕರಣದಲ್ಲಿ ಉದ್ಯಮಿ ನವನೀತ್ ಕಲ್ರಾಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್, ಕಲ್ರಾ ವಿರುದ್ಧದ ಆರೋಪಗಳು ಗಂಭೀರವಾಗಿದ್ದು, ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಅಲ್ಲದೆ, ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದ ಹೈಕೋರ್ಟ್ ಮೇ 18 ಕ್ಕೆ ವಿಚಾರಣೆ ಮುಂದೂಡಿದೆ.
ಇದನ್ನೂ ಓದಿ:ಚಿತ್ರಕೂಟ್ ಜೈಲಿನಲ್ಲಿ ಗ್ಯಾಂಗ್ವಾರ್: ಮೂವರು ಕೈದಿಗಳು ಗುಂಡೇಟಿಗೆ ಬಲಿ
ಕಳೆದ ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾಗಿತ್ತು. ಇದೇ ಸಂದರ್ಭದಲ್ಲಿ ಉದ್ಯಮಿ ನವನೀತ್ ಕಲ್ರಾ ಒಡೆತನದ ಕೆಫೆಯೂ ಸೇರಿ ಕೆಲವೆಡೆ ಅಕ್ರಮವಾಗಿ ಆಕ್ಸಿಜನ್ ಕಾನ್ಸಂಟ್ರೇಟರ್ಗಳನ್ನು ಸಂಗ್ರಹಿಸಿದ್ದವರ ಮೇಲೆ ಪೊಲೀಸ್ ದಾಳಿ ನಡೆದಿತ್ತು. ಅದರಲ್ಲಿ ಕಲ್ರಾ ಅಕ್ರಮವಾಗಿ ಆಕ್ಸಿಜನ್ ಕಾನ್ಸಂಟ್ರೇಟರ್ ಸಂಗ್ರಹಿಸಿರುವುದು ಪತ್ತೆಯಾಗಿತ್ತು.