ಇಂದೋರ್(ಮಧ್ಯಪ್ರದೇಶ): ದೇಶಾದ್ಯಂತ ಕೊರೊನಾ ಮೂರನೇ ಅಲೆ ಜೋರಾಗಿದೆ. ಬಹುತೇಕ ಎಲ್ಲ ರಾಜ್ಯಗಳಲ್ಲಿ ಪ್ರತಿದಿನ ಸಾವಿರಾರು ಹೊಸ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮಧ್ಯಪ್ರದೇಶದಲ್ಲಿ ಈಗಾಗಲೇ ನೈಟ್ ಕರ್ಫ್ಯೂ ಜಾರಿಯಾಗಿದೆ. ಕೋವಿಡ್ ನಿಯಮ ಉಲ್ಲಂಘನೆ ಮಾಡುವವರಿಗೆ 'Open Jails' ಶಿಕ್ಷೆ ವಿಧಿಸಲಾಗುವುದು ಎಂದು ಗೃಹ ಸಚಿವ ಡಾ.ನರೋತ್ತಮ್ ಮಿಶ್ರಾ ಹೇಳಿದರು.
ರಾಜ್ಯದಲ್ಲಿ ಲಾಕ್ಡೌನ್ ಹೇರಿಕೆ ಮಾಡುವ/ ಮಾರುಕಟ್ಟೆ ಮುಚ್ಚುವ ಯಾವುದೇ ಪ್ರಸ್ತಾವನೆ ಗೃಹ ಇಲಾಖೆ ಮುಂದಿಲ್ಲ ಎಂದಿರುವ ಅವರು, ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಮಾಸ್ಕ್ ಧರಿಸದೇ ಓಡಾಡುವವರು ಹಾಗೂ ಕೋವಿಡ್ ನಿಯಮ ಉಲ್ಲಂಘನೆ ಮಾಡುವವರ ಮೇಲೆ ಹೆಚ್ಚಿನ ದಂಡ ವಿಧಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದರು.
ಇದನ್ನೂ ಓದಿ: ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿ ಜೊತೆ ಮಹಿಳಾ ನ್ಯಾಯಾಧೀಶೆ ಲಿಪ್‌ಲಾಕ್!
ರಾಜ್ಯದಲ್ಲಿ ಕೋವಿಡ್ ಪ್ರೋಟೋಕಾಲ್ ಉಲ್ಲಂಘಿಸುವವರನ್ನು ತೆರೆದ ಜೈಲುಗಳಲ್ಲಿ ಇಡುವ ನಿರ್ಧಾರ ತೆಗೆದುಕೊಂಡಿದ್ದಾಗಿ ಸಚಿವರು ಎಚ್ಚರಿಸಿದರು.
ಮಧ್ಯಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,033 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಪ್ರಮುಖವಾಗಿ ಇಂದೋರ್ನಲ್ಲೇ ವಾರಕ್ಕೆ ಶೇ. 55ರಷ್ಟು ಪ್ರಕರಣ ದಾಖಲಾಗುತ್ತಿದೆ.