ETV Bharat / bharat

ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ, ಬಿಜೆಪಿ ಗೆಲುವಿಗೆ ಎಲ್ಲರೂ ಒಗ್ಗಟ್ಟಾಗಿ: ರಾಜಸ್ಥಾನ ನಾಯಕರಿಗೆ ಪ್ರಧಾನಿ ಮೋದಿ ಸೂಚನೆ

''ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಗೆಲ್ಲಲು ಎಲ್ಲರೂ ಒಗ್ಗಟ್ಟಾಗಬೇಕು'' ಎಂದು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನ ಬಿಜೆಪಿ ನಾಯಕರಿಗೆ ನೇರವಾಗಿ ಹೇಳಿದ್ದಾರೆ.

Prime Minister Narendra Modi
ಪ್ರಧಾನಿ ನರೇಂದ್ರ ಮೋದಿ
author img

By ETV Bharat Karnataka Team

Published : Oct 21, 2023, 1:00 PM IST

ನವದೆಹಲಿ: ''ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಎಲ್ಲರೂ ಒಗ್ಗೂಡಬೇಕು'' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಬಿಜೆಪಿ ನಾಯಕರಿಗೆ ಸಂದೇಶ ನೀಡಿದ್ದಾರೆ.

ಮೂಲಗಳ ಪ್ರಕಾರ, ಶುಕ್ರವಾರ ಇಲ್ಲಿ ನಡೆದ ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯಲ್ಲಿ ರಾಜಸ್ಥಾನ ಬಿಜೆಪಿಯ ಹಿರಿಯ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ರಾಜ್ಯ ಘಟಕದಲ್ಲಿನ ಗುಂಪುಗಾರಿಕೆಯನ್ನು ಅರಿತುಕೊಂಡರು ಮತ್ತು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ನಾಯಕರಿಗೆ ತಿಳಿಸಿದ್ದಾರೆ.

ಸಭೆಯಲ್ಲಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸೇರಿದಂತೆ ರಾಜಸ್ಥಾನ ಬಿಜೆಪಿಯ ಹಲವಾರು ಹಿರಿಯ ನಾಯಕರು ಉಪಸ್ಥಿತರಿದ್ದರು. ವಸುಂಧರಾ ರಾಜೇ ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಉಳಿದಿರುವ ಅಭ್ಯರ್ಥಿಗಳ ಹೆಸರನ್ನು ಚರ್ಚಿಸಿ ಅಂತಿಮಗೊಳಿಸಲು ಸಭೆ ಕರೆಯಲಾಗಿದೆ.

ಮಧ್ಯಪ್ರದೇಶದ 92 ಹೆಸರುಗಳು ಅಂತಿಮ: ಶುಕ್ರವಾರ ನಡೆದ ಸಭೆಯಲ್ಲಿ ಮಧ್ಯಪ್ರದೇಶದ 94 ಸ್ಥಾನಗಳ ಅಭ್ಯರ್ಥಿಗಳ ಹೆಸರನ್ನು ಪಕ್ಷದ ಸಿಇಸಿ ಸಭೆಯಲ್ಲಿ ಚರ್ಚಿ ಮಾಡಲಾಗಿದೆ. ಆದರೆ, ಸಭೆಯಲ್ಲಿ 92 ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ಈ ಎರಡು ರಾಜ್ಯಗಳ ಅಭ್ಯರ್ಥಿಗಳ ಮುಂದಿನ ಪಟ್ಟಿ ಶನಿವಾರ ಅಥವಾ ಭಾನುವಾರ ಬಿಡುಗಡೆಯಾಗಬಹುದು ಎಂದು ಮೂಲಗಳು ತಿಳಿಸಿವೆ.

136 ಹೆಸರುಗಳು ಫೈನಲ್​: 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯ ಚುನಾವಣೆಗೆ ಬಿಜೆಪಿ ಈಗಾಗಲೇ 136 ಹೆಸರುಗಳನ್ನು ಒಳಗೊಂಡ ನಾಲ್ಕು ಪಟ್ಟಿಗಳನ್ನು ಬಿಡುಗಡೆ ಮಾಡಿದೆ. ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು ಮತದಾನ ನಡೆಯಲಿದೆ.

79 ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಪಕ್ಷವು ಶುಕ್ರವಾರ 100 ಕ್ಕೂ ಹೆಚ್ಚು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಚರ್ಚಿಸಿದೆ. ಆದ್ರೂ, ಪಕ್ಷದ ಸಿಇಸಿ ಸಭೆಯಲ್ಲಿ 79 ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ.

ರಾಜಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಗಳ ಒಂದು ಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಿದೆ. ಅಕ್ಟೋಬರ್ 9 ರಂದು ಬಿಡುಗಡೆಯಾದ ರಾಜಸ್ಥಾನದ ಮೊದಲ ಪಟ್ಟಿಯಲ್ಲಿ ಬಿಜೆಪಿ 41 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ರಾಜ್ಯ ವಿಧಾನಸಭೆಗೆ 200 ಸದಸ್ಯರನ್ನು ಆಯ್ಕೆ ಮಾಡಲು ರಾಜಸ್ಥಾನದಲ್ಲಿ ನವೆಂಬರ್ 25 ರಂದು ಚುನಾವಣೆ ನಡೆಯಲಿದೆ. ಶುಕ್ರವಾರದ ಸಭೆಯಲ್ಲಿ ತೆಲಂಗಾಣ ಅಭ್ಯರ್ಥಿಗಳ ಬಗ್ಗೆಯೂ ಚರ್ಚೆ ನಡೆದಿದೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್​ ಮೈತ್ರಿಗೆ ಪಿಣರಾಯಿ ವಿಜಯನ್ ಒಪ್ಪಿಗೆ ವಿಚಾರ: ಕೇರಳ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ದೇವೇಗೌಡರ ಹೇಳಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.