ETV Bharat / bharat

ವ್ಯಕ್ತಿಯ ಒಪ್ಪಿಗೆ ಪಡೆಯದೇ ಬಲವಂತದ ಲಸಿಕೆ ಹಾಕುವಂತಿಲ್ಲ: ಸುಪ್ರೀಂಗೆ ಅಫಿಡವಿಟ್​​ ಸಲ್ಲಿಸಿದ ಕೇಂದ್ರ - ಬಲವಂತದ ಲಸಿಕೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಸ್ಪಷ್ಟನೆ

ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿರುವ ಕೋವಿಡ್​ ಮಾರ್ಗ ಸೂಚಿಯ ಪ್ರಕಾರ ವ್ಯಕ್ತಿಯ ಒಪ್ಪಿಗೆ ಪಡೆಯದೇ ಬಲವಂತದ ಲಸಿಕೆ ಹಾಕುವಂತಿಲ್ಲ. ವ್ಯಾಕ್ಸಿನೇಷನ್​ ಪ್ರಮಾಣಪತ್ರ ನೀಡುವ ಕುರಿತಂತೆ ವಿಕಲಾಂಗ್​ ವ್ಯಕ್ತಿಗಳಿಗೆ ವಿನಾಯಿತಿ ನೀಡುವ ವಿಷಯದ ಬಗ್ಗೆ ಹಾಗೂ ಈ ಸಂಬಂಧದ ಪ್ರಮಾಣ ಪತ್ರದ ಕಡ್ಡಾಯಗೊಳಿಸಿದ ಎಸ್​​ಒಪಿಯನ್ನ ನೀಡಲಾಗಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ತಿಳಿಸಿದೆ.

No person can be forced to get vaccinated against their wishes: Centre to SC

author img

By

Published : Jan 17, 2022, 9:12 AM IST

ನವದೆಹಲಿ: ಯಾವುದೇ ಕಾರಣಕ್ಕೂ ವ್ಯಕ್ತಿಯ ಒಪ್ಪಿಗೆ ಪಡೆಯದೇ ಬಲವಂತದ ಲಸಿಕೆಯನ್ನು ಹಾಕುವಂತಿಲ್ಲ ಹಾಗೂ ಹಾಕಬಾರದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಸ್ಪಷ್ಟನೆ ನೀಡಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿರುವ ಕೋವಿಡ್​ ಮಾರ್ಗ ಸೂಚಿಯ ಪ್ರಕಾರ ವ್ಯಕ್ತಿಯ ಒಪ್ಪಿಗೆ ಪಡೆಯದೇ ಬಲವಂತದ ಲಸಿಕೆ ಹಾಕುವಂತಿಲ್ಲ. ವ್ಯಾಕ್ಸಿನೇಷನ್​ ಪ್ರಮಾಣಪತ್ರ ನೀಡುವ ಕುರಿತಂತೆ ವಿಕಲಾಂಗ​ ವ್ಯಕ್ತಿಗಳಿಗೆ ವಿನಾಯಿತಿ ನೀಡುವ ವಿಷಯದ ಬಗ್ಗೆ ಹಾಗೂ ಈ ಸಂಬಂಧದ ಪ್ರಮಾಣ ಪತ್ರದ ಕಡ್ಡಾಯಗೊಳಿಸಿದ ಎಸ್​​ಒಪಿಯನ್ನ ನೀಡಲಾಗಿಲ್ಲ ಎಂಬುದನ್ನು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ತಿಳಿಸಿದೆ.

ವಿಕಲಚೇತನರ ಮನೆ - ಮನೆಗೆ ಹೋಗಿ, ಆದ್ಯತೆಯ ಮೇರೆಗೆ COVID-19 ಲಸಿಕೆ ನೀಡಿಕೆ ಬಗ್ಗೆ ಎನ್‌ಜಿಒ ಎವಾರಾ ಫೌಂಡೇಶನ್ ಮಾಡಿದ ಮನವಿಗೆ ಪ್ರತಿಯಾಗಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕೇಂದ್ರವು ಈ ಅಂಶವನ್ನು ಹೇಳಿದೆ.
‘ಭಾರತ ಸರ್ಕಾರ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಬಿಡುಗಡೆ ಮಾಡಿರುವ ನಿರ್ದೇಶನ ಮತ್ತು ಮಾರ್ಗಸೂಚಿಗಳು ಸಂಬಂಧಪಟ್ಟ ವ್ಯಕ್ತಿಯ ಒಪ್ಪಿಗೆಯನ್ನು ಪಡೆಯದೇ ಯಾವುದೇ ಬಲವಂತದ ಲಸಿಕೆಯನ್ನು ಹಾಕಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಸಾಂಕ್ರಾಮಿಕದ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು COVID-19 ವ್ಯಾಕ್ಸಿನೇಷನ್ ಹಾಕಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸಲ್ಲಿಸಿದ ಅಫಿಡವಿಟ್​​ನಲ್ಲಿ ಹೇಳಲಾಗಿದೆ. ಎಲ್ಲ ನಾಗರಿಕರು ಲಸಿಕೆ ಪಡೆಯಬೇಕು ಮತ್ತು ಅದಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಕೂಡಾ ಮಾಡಲಾಗಿದೆ.

ವಿವಿಧ ಮುದ್ರಣ ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಸುಪ್ರೀಂಗೆ ಸ್ಪಷ್ಟಪಡಿಸಿದೆ. ಆದಾಗ್ಯೂ, ಯಾವುದೇ ವ್ಯಕ್ತಿಯನ್ನು ಅವರ ಇಚ್ಛೆಗೆ ವಿರುದ್ಧವಾಗಿ ಲಸಿಕೆ ಹಾಕುವಂತೆ ಒತ್ತಾಯಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಇದನ್ನು ಓದಿ:ಲಸಿಕೆ ಪಡೆಯದರಿಗೆ ನಿಷೇಧ: ಹೊಸ ಕಾನೂನು ಜಾರಿಗೆ ತಂದಿದೆ ಈ ರಾಷ್ಟ್ರ!

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.