ETV Bharat / bharat

ಹಿಂಸಾಚಾರದಿಂದ ಸಮಸ್ಯೆಗೆ ಪರಿಹಾರ ಸಿಗಲ್ಲ, ಕೂಡ್ಲೇ ಕೃಷಿ ಕಾಯ್ದೆಗಳನ್ನ ರದ್ದು ಮಾಡಿ : ರಾಹುಲ್ ಆಗ್ರಹ

ಪ್ರತಿಭಟನಾನಿರತ ರೈತರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿ ಹಲವಾರು ಜನರು ಗಾಯಗೊಂಡಿದ್ದಾರೆ..

rahul gandhi
ರಾಹುಲ್ ಗಾಂಧಿ
author img

By

Published : Jan 26, 2021, 4:53 PM IST

ನವದೆಹಲಿ : ಹಿಂಸಾಚಾರವು ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ರೈತರ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಮೂರೂ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಯಾರು ಗಾಯಗೊಂಡರೂ ಕೂಡ ಅದು ಬಳಲುತ್ತಿರುವ ದೇಶ ಎಂದು ರಾಹುಲ್ ಟ್ವೀಟ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರ ಜೊತೆಗೆ ಹಿಂಸಾಚಾರವು ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಯಾರಿಗಾದ್ರೂ ತೊಂದರೆಯಾದ್ರೆ ಅದರಿಂದ ದೇಶಕ್ಕೆ ನಷ್ಟವಾಗುತ್ತದೆ. ಕೃಷಿ ವಿರೋಧಿ ಕಾನೂನುಗಳನ್ನು ರಾಷ್ಟ್ರೀಯ ಹಿತದೃಷ್ಟಿಯಿಂದ ಹಿಂತೆಗೆದುಕೊಳ್ಳಿ" ಎಂದು ರಾಹುಲ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವಾಟ್ಸ್‌ಆ್ಯಪ್ ಪ್ರೈವಸಿ.. ನಾಗರಿಕರ ಗೌಪ್ಯತೆ ಸರ್ಕಾರದ ಜವಾಬ್ದಾರಿ..

ಮತ್ತೊಂದೆಡೆ ಟ್ರ್ಯಾಕ್ಟರ್ ರ್ಯಾಲಿಗೆ ನಿರ್ಬಂಧ ವಿಧಿಸಿದ್ದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಜೋರಾಗಿದ್ದು, ಪ್ರತಿಭಟನಾಕಾರರು ಸರ್ಕಾರಿ ವಾಹನಗಳನ್ನು ಧ್ವಂಸ ಮಾಡಿರುವುದು ಮಾತ್ರವಲ್ಲದೇ, ಕೆಂಪುಕೋಟೆ ಮೇಲೆ ರೈತ ಧ್ವಜವನ್ನು ಹಾರಿಸಿದ್ದಾರೆ. ಪ್ರತಿಭಟನಾನಿರತ ರೈತರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿ ಹಲವಾರು ಜನರು ಗಾಯಗೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.