ETV Bharat / bharat

ಹಳೆಯ ಪಿಂಚಣಿ ಯೋಜನೆ ಮರುಜಾರಿ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿಲ್ಲ: ಸಚಿವ ಭಾಗವತ್

author img

By

Published : Dec 13, 2022, 11:00 AM IST

ಪಂಜಾಬ್ ಸರ್ಕಾರದಿಂದ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಪ್ರಸ್ತಾವನೆ ಬಂದಿಲ್ಲ ಎಂದು ಸಚಿವ ಭಾಗವತ್ ಕರದ್ ಹೇಳಿದ್ದಾರೆ.

Bhagwat Karad
ಸಚಿವ ಭಾಗವತ್ ಕರದ್

ನವದೆಹಲಿ: ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವುದು ಕೇಂದ್ರ ಸರ್ಕಾರದ ಪರಿಗಣನೆಯಲ್ಲಿ ಯಾವುದೇ ಪ್ರಸ್ತಾಪವಿಲ್ಲ ಎಂದು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಅವರ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕರದ್ ಲೋಕಸಭೆಗೆ ತಿಳಿಸಿದರು.

ರಾಜಸ್ಥಾನ, ಛತ್ತೀಸಗಢ ಮತ್ತು ಜಾರ್ಖಂಡ್‌ ರಾಜ್ಯಗಳು ತಮ್ಮ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿಗೊಳಿಸುವುದಾಗಿ ಕೇಂದ್ರ ಸರ್ಕಾರ/ಪಿಂಚಣಿ ನಿಧಿ ‌ನಿರ್ವಹಣೆ ಮತ್ತು ಅಭಿವೃದ್ಧಿ ಪ್ರಾಧಿಕಾರಕ್ಕೆ (ಪಿಎಫ್‌ಆರ್‌ಡಿಎ) ಮಾಹಿತಿ ನೀಡಿವೆ. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌) ಅಡಿ ಸಂಗ್ರಹ ಆಗಿರುವ ಮೊತ್ತವನ್ನು ಹಿಂದಿರುಗಿಸುವಂತೆಯೂ ಕೇಳಿವೆ. ಆದರೆ, ಎನ್‌ಪಿಎಸ್‌ನಲ್ಲಿ ಇರುವ ಹಣವನ್ನು ರಾಜ್ಯ ಸರ್ಕಾರಗಳಿಗೆ ಹಿಂದಿರುಗಿಸಲು ಪಿಎಫ್‌ಆರ್‌ಡಿಎ ಕಾಯ್ದೆ 2013ರ ಅಡಿಯಲ್ಲಿ ಅವಕಾಶ ಇಲ್ಲ ಎಂದು ಪ್ರಾಧಿಕಾರವು ಸಂಬಂಧಪಟ್ಟ ರಾಜ್ಯಗಳಿಗೆ ಸೂಚನೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವ ಸಂಬಂಧ ಪಂಜಾಬ್‌ ಸರ್ಕಾರವು ನವೆಂಬರ್‌ 18ರಂದು ಅಧಿಸೂಚನೆ ಹೊರಡಿಸಿದೆ. ಆದರೆ, ಎನ್‌ಪಿಎಸ್‌ನಲ್ಲಿ ಇರುವ ಹಣವನ್ನು ಹಿಂದಿರುಗಿಸುವಂತೆ ಪಂಜಾಬ್‌ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ. ರಾಜಸ್ಥಾನ, ಛತ್ತೀಸ್‌ಗಢ ಮತ್ತು ಜಾರ್ಖಂಡ್ ಸರ್ಕಾರಗಳ ಪ್ರಸ್ತಾವನೆಗಳಿಗೆ ಸಂಬಂಧಿಸಿದಂತೆ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 2013 ರ ಅಡಿಯಲ್ಲಿ ಯಾವುದೇ ನಿಬಂಧನೆಗಳಿಲ್ಲ ಎಂದು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಳೆ ಪಿಂಚಣಿ ಯೋಜನೆ ಜಾರಿಗೆ ಪಂಜಾಬ್​ ಸಚಿವ ಸಂಪುಟ ಅನುಮೋದನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.