ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿಗೆ ಸೇರಿಸಬೇಕು ಎಂಬ ಕೂಗು ಕೇಳಿ ಬಂದರೂ ಸಹ ಪೆಟ್ರೋಲಿಯಂ ಉತ್ಪನ್ನಗಳನ್ನು ಸುಧಾರಿತ ತೆರಿಗೆ ಆಡಳಿತಕ್ಕೆ(ಜಿಎಸ್ಟಿ) ತರಲು ಜಿಎಸ್‌ಟಿ ಕೌನ್ಸಿಲ್ ಶಿಫಾರಸು ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಮಂಗಳವಾರ ತಿಳಿಸಿದೆ.
ಪೆಟ್ರೋಲಿಯಂ ಮೇಲಿನ ಅಬಕಾರಿ ಸುಂಕ, ಮೂಲಸೌಕರ್ಯ ಮತ್ತು ಇತರ ಅಭಿವೃದ್ಧಿ ವೆಚ್ಚಗಳ ಸಂಪನ್ಮೂಲಗಳ ಉತ್ಪಾದನೆಗೆ ಪೆಟ್ರೋಲಿಯಂ ಉತ್ಪನ್ನಗಳನ್ನು ಕಾಲಕಾಲಕ್ಕೆ ಮಾಪನ ಮಾಡಲಾಗುತ್ತದೆ.
ಆದರೆ, ಸುಧಾರಿತ ತೆರಿಗೆ ನೀತಿಗೆ ಇವುಗಳನ್ನು ಶಿಫಾರಸು ಮಾಡಲಾಗಿಲ್ಲ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ (ಸರಕು ಮತ್ತು ಸೇವಾ ತೆರಿಗೆ) ಅಡಿಯಲ್ಲಿ ತರಬೇಕು ಎಂಬುದು ಜನರ ಒತ್ತಾಯವಾಗಿದೆ. ಸಂವಿಧಾನದ 279ಎ (5) ವಿಧಿಯು ಕೂಡ ಇದನ್ನೇ ಸೂಚಿಸುತ್ತದೆ.
ಪೆಟ್ರೋಲಿಯಂ ಕಚ್ಚಾ ತೈಲದ ಮೇಲೆ ಸರಕು ಮತ್ತು ಸೇವಾ ತೆರಿಗೆಯನ್ನು ವಿಧಿಸುವ ದಿನಾಂಕ, ಈಡ್ ಡೀಸೆಲ್, ಮೋಟಾರ್ ಸ್ಪಿರಿಟ್ (ಪೆಟ್ರೋಲ್ ಮಾದರಿ), ನೈಸರ್ಗಿಕ ಅನಿಲ ಮತ್ತು ವಾಯುಯಾನ ಟರ್ಬೈನ್ ಇಂಧನ(ಎಟಿಎಫ್), ಈ ಉತ್ಪನ್ನಗಳನ್ನು ಜಿಎಸ್‌ಟಿಗೆ ಸೇರಿಸಲು ಕೌನ್ಸಿಲ್‌ನ ಶಿಫಾರಸು ಅಗತ್ಯವಿದೆ ಎಂದು ಸಚಿವರು ಹೇಳಿದರು.
ಇದನ್ನೂ ಓದಿ: ಸಣ್ಣಗಿದ್ರೂ ಮಾತಾಡ್ತಾರೆ, ದಪ್ಪ ಇದ್ರೂ ಟೀಕಿಸ್ತಾರೆ.. ಬಾಡಿ ಶೇಮಿಂಗ್ ಬಗ್ಗೆ ನಟಿ ಆಥಿಯಾ ಶೆಟ್ಟಿ ಗರಂ
ರಾಜ್ಯಗಳನ್ನು ಪ್ರತಿನಿಧಿಸುವ ಜಿಎಸ್‌ಟಿ ಕೌನ್ಸಿಲ್, ಈ ಸರಕುಗಳನ್ನು ಜಿಎಸ್‌ಟಿ ಅಡಿಯಲ್ಲಿ ಸೇರಿಸಲು ಯಾವುದೇ ಶಿಫಾರಸು ಮಾಡಿಲ್ಲ. ಅಂತಾರಾಷ್ಟ್ರೀಯ ಇಂಧನ ಬೆಲೆಗಳಲ್ಲಾಗುವ ಬದಲಾವಣೆಗಳನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಸಚಿವ ಪಂಕಜ್ ಚೌಧರಿ ಹೇಳಿದರು.