ETV Bharat / bharat

ಕೇರಳದಲ್ಲಿ ಸಂಪೂರ್ಣ ಲಾಕ್​ಡೌನ್​ ಇಲ್ಲ: ಸಿಎಂ ಪಿಣರಾಯಿ ವಿಜಯನ್​ ಸ್ಪಷ್ಟನೆ

author img

By

Published : Apr 26, 2021, 8:43 PM IST

ಕೇರಳ ರಾಜ್ಯದಲ್ಲಿ ಸಂಪೂರ್ಣ ಲಾಕ್​ಡೌನ್​ ಜಾರಿಗೊಳಿಸುವುದಿಲ್ಲ ಎಂದು ಸಿಎಂ ಪಿಣರಾಯಿ ವಿಜಯನ್​ ಘೋಷಿಸಿದ್ದಾರೆ.

kerala
kerala

ತಿರುವನಂತಪುರ/ ಕೇರಳ: ಸೋಮವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇರಳದಲ್ಲಿ ಸಂಪೂರ್ಣ ಲಾಕ್​ಡೌನ್​ ಘೋಷಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಅವರು ಮಂಡಿಸಿದ ಲಾಕ್​​ಡೌನ್​ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಮತ್ತು ಸಿಪಿಎಂ ಮತ್ತು ಬಿಜೆಪಿ ನಾಯಕರು ಸಮ್ಮತಿಸಿದರಾದರೂ ಕೊನೆಯಲ್ಲಿ ಸಂಪೂರ್ಣ ಲಾಕ್​ಡೌನ್​ ಬೇಡ ಹಾಗೂ ಶನಿವಾರ ಮತ್ತು ಭಾನುವಾರ ಮಿನಿ ಲಾಕ್‌ಡೌನ್‌ಗಳನ್ನು ಮುಂದುವರಿಸಲು ಸಭೆ ನಿರ್ಧರಿಸಿತು.

ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತೊಂದು ಲಾಕ್ ಡೌನ್ ರಾಜ್ಯದ ಆರ್ಥಿಕತೆ ಮತ್ತು ಜನರ ಜೀವನೋಪಾಯಕ್ಕೆ ಹಾನಿಕಾರಕ ಎಂದು ಹೇಳಿದರು. ಹೀಗಾಗಿ ಸೋಂಕು ಪ್ರಕರಣಗಳು ಹೆಚ್ಚಿರುವ ಹಾಗೂ ಕಂಟೈನ್​ಮೆಂಟ್​ ಜೋನ್​ಗಳಲ್ಲಿ ಮಾತ್ರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲು ಸಭೆ ತೀರ್ಮಾನಿಸಿತು.

ಇನ್ನು ಮೇ 2 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಕೊರೊನಾ ಹಿನ್ನೆಲೆ ಅಂದು ಯಾವುದೇ ಸಂಭ್ರಮಾಚರಣೆ ಮಾಡದಿರಲು ರಾಜಕೀಯ ಪಕ್ಷಗಳು ಒಪ್ಪಿಗೆ ಸೂಚಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.