ಸ್ಟಾಕ್‌ಹೋಮ್: ಮಾನವ ವಿಕಾಸದ ಸಂಶೋಧನೆಗಾಗಿ ಸ್ವೀಡಿಷ್ ವಿಜ್ಞಾನಿ ಸ್ವಾಂಟೆ ಪಾಬೊ ಅವರಿಗೆ ಈ ವರ್ಷದ ಶರೀರಶಾಸ್ತ್ರ ಅಥವಾ ವೈದ್ಯಕೀಯ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ.
ಅಳಿವಿನಂಚಿನಲ್ಲಿರುವ ಹೋಮಿನಿನ್‌ಗಳು ಮತ್ತು ಮಾನವ ವಿಕಾಸದ ಜೀನೋಮ್‌ಗಳಿಗೆ ಸಂಬಂಧಿಸಿದ ಅವರ ಸಂಶೋಧನೆಗಾಗಿ ಸ್ವಾಂಟೆ ಪಾಬೊ ಅವರಿಗೆ ಪ್ರಶಸ್ತಿಯನ್ನು ನೀಡಲಾಯಿತು ಎಂದು ನೊಬೆಲ್ ಪ್ರಶಸ್ತಿ ಸಮಿತಿ ಹೇಳಿದೆ.
ನೊಬೆಲ್ ಸಮಿತಿಯ ಕಾರ್ಯದರ್ಶಿ ಥಾಮಸ್ ಪರ್ಲ್‌ಮನ್ ಅವರು ಸೋಮವಾರ ಸ್ವೀಡನ್‌ನ ಸ್ಟಾಕ್‌ಹೋಮ್‌ನಲ್ಲಿರುವ ಕರೋಲಿನ್ಸ್ಕಾ ಇನ್‌ಸ್ಟಿಟ್ಯೂಟ್‌ನಲ್ಲಿ ಪ್ರಶಸ್ತಿಗೆ ಆಯ್ಕೆಯಾದವರ ಹೆಸರನ್ನು ಘೋಷಿಸಿದರು. ಮೆಡಿಸಿನ್ ಪ್ರಶಸ್ತಿಯು ನೊಬೆಲ್ ಪ್ರಶಸ್ತಿ ಘೋಷಣೆಯಾದ ಒಂದು ವಾರದ ಬಳಿಕ ಘೋಷಣೆಯಾಗಲಿದೆ.
ಇದನ್ನೂ ಓದಿ: ನೊಬೆಲ್ ಪ್ರಶಸ್ತಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಕುತೂಹಲಕಾರಿ ಮಾಹಿತಿ
ಮಂಗಳವಾರ ಭೌತಶಾಸ್ತ್ರ, ಬುಧವಾರ ರಸಾಯನಶಾಸ್ತ್ರ ಮತ್ತು ಗುರುವಾರ ಸಾಹಿತ್ಯಕ್ಕೆ ಸಂಬಂಧಿಸಿದ ಪ್ರಶಸ್ತಿಯನ್ನು ಘೋಷಿಸಲಾಗುವುದು. 2022 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಮತ್ತು ಅರ್ಥಶಾಸ್ತ್ರ ಪ್ರಶಸ್ತಿಯನ್ನು ಅಕ್ಟೋಬರ್ 10 ರಂದು ಪ್ರಕಟಿಸಲಾಗುವುದು.