ETV Bharat / bharat

Encounter: ಕಣಿವೆ ನಾಡಿನಲ್ಲಿ ಐವರು ವಿದೇಶಿ ಉಗ್ರರನ್ನು ಹೊಡೆದುರುಳಿಸಿದ ಸೇನೆ! - ಭಯೋತ್ಪಾದಕರು ಗುಂಡಿನ ದಾಳಿ

Terrorists Killed in Encounter: ಕಣಿವೆ ನಾಡಿನಿಂದ ದೊಡ್ಡ ಸುದ್ದಿಯೊಂದು ಬರುತ್ತಿದೆ. ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದ್ದು, ಐವರು ಉಗ್ರರು ಹತರಾಗಿದ್ದಾರೆ ಎಂದು ವರದಿಯಾಗಿದೆ.

Nocturnal Encounter Breaks Out Along LoC  Encounter Breaks Out Along LoC in Kupwara  foreign terrorists killed in encounter  Encounter Breaks Out Along LoC  ವಿದೇಶಿ ಉಗ್ರರನ್ನು ಹೊಡೆದುರುಳಿಸಿದ ಸೇನೆ  ಕಣಿವೆ ನಾಡಿನಲ್ಲಿ ಐವರು ವಿದೇಶಿ ಉಗ್ರ  ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್  ಭಾರತ ಪಾಕ್ ಗಡಿ ನಿಯಂತ್ರಣ ರೇಖೆ  ಭಯೋತ್ಪಾದಕರು ಗುಂಡಿನ ದಾಳಿ  ಜಂಟಿ ತಂಡವು ತಡರಾತ್ರಿ ಗಡಿ ನಿಯಂತ್ರಣ ರೇಖೆ
ಕಣಿವೆ ನಾಡಿನಲ್ಲಿ ಐವರು ವಿದೇಶಿ ಉಗ್ರರನ್ನು ಹೊಡೆದುರುಳಿಸಿದ ಸೇನೆ!
author img

By

Published : Jun 16, 2023, 10:14 AM IST

ಕುಪ್ವಾರ, ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಿಂದ ಬ್ರೇಕಿಂಗ್​ ಸುದ್ದಿಯೊಂದು ಬಂದಿದೆ. ಭಾರತ ಪಾಕ್ ಗಡಿ ನಿಯಂತ್ರಣ ರೇಖೆಯ ಪಕ್ಕದಲ್ಲಿರುವ ಕುಪ್ವಾರ ಜಿಲ್ಲೆಯ ಬಳಿ ಭದ್ರತಾ ಪಡೆ ಮತ್ತು ಭಯೋತ್ಪಾದಕರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 5 ಉಗ್ರರು (Terrorists Killed in Encounter) ಹತರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನೆಯ ಜಂಟಿ ಕಾರ್ಯಾಚರಣೆಯಲ್ಲಿ ಈ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.

ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಈ ಶೋಧ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಏಜೆನ್ಸಿಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ 5 ವಿದೇಶಿ ಭಯೋತ್ಪಾದಕರು ಹತರಾಗಿದ್ದಾರೆ ಎಂಬುದು ತಿಳಿದು ಬಂದಿದೆ.

ಭದ್ರತಾ ಪಡೆಗಳು ಮತ್ತು ಪೊಲೀಸ್ ಸಿಬ್ಬಂದಿಗಳ ಜಂಟಿ ತಂಡವು ತಡರಾತ್ರಿ ಗಡಿ ನಿಯಂತ್ರಣ ರೇಖೆಯ ಪ್ರದೇಶವಾದ ಜಾಮಗುಂಡ್‌ನಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಾಗ ಈ ಗುಂಡಿನ ದಾಳಿ ನಡೆದಿದೆ ಎಂದು ಸೇನೆ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರ ಪ್ರಕಾರ, ಮೃತ ಉಗ್ರರು ವಿದೇಶಿಗರು. ಈ ಪ್ರದೇಶದಲ್ಲಿ ಉಗ್ರರ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದಿತ್ತು. ಬಳಿಕ ಸೇನೆ ಶೋಧ ಕಾರ್ಯಾಚರಣೆಯನ್ನು ಸಹ ಪ್ರಾರಂಭಿಸಿತ್ತು. ಆಗ ಉಗ್ರರು ಸೇನೆಯನ್ನು ಕಂಡು ಗುಂಡಿನ ದಾಳಿ ನಡೆಸಿದರು. ಆ ಕಡೆಯಿಂದಲೂ ಗುಂಡಿನ ದಾಳಿ ಪ್ರಾರಂಭವಾಯಿತು. ಗುಂಡಿನ ದಾಳಿಯಲ್ಲಿ ಐವರು ವಿದೇಶಿ ಉಗ್ರರನ್ನು ಸೇನೆ ಹೊಡೆದುರುಳಿಸಿದೆ. ಈ ಘರ್ಷಣೆಯಿಂದಾಗಿ ಸ್ಥಳೀಯ ಜನರು ಭಯಭೀತಗೊಂಡಿದ್ದಾರೆ. ಅಷ್ಟೇ ಅಲ್ಲ ಜನರು ಭಯದಿಂದ ಮನೆಗಳಿಗೆ ಬೀಗ ಹಾಕಿಕೊಂಡಿದ್ದಾರೆ. ಈ ಘಟನೆಯ ನಂತರ ಈ ಪ್ರದೇಶದಲ್ಲಿ ವಾಹನ ಸಂಚಾರಕ್ಕೂ ತೊಂದರೆಯಾಗಿದೆ.

ಈ ಹಿಂದೆ ಕಾಶ್ಮೀರ ವಲಯ ಪೊಲೀಸರು ಕೂಡ ಈ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಟ್ವೀಟ್ ಮಾಡಿದ್ದರು. ಭದ್ರತಾ ಪಡೆಗಳಿಂದ ನಿರ್ದಿಷ್ಟ ಮಾಹಿತಿ ಪಡೆದ ನಂತರ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಪ್ರಾರಂಭವಾಯಿತು ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಪೊಲೀಸರ ಪ್ರಕಾರ, ಕುಪ್ವಾರಾ ಜಿಲ್ಲೆಯ ಎಲ್‌ಒಸಿಯ ಜಾಮ್‌ಗುಂಡ್ ಪ್ರದೇಶದಲ್ಲಿ ಭದ್ರತಾ ಪಡೆಗಳು, ಪೊಲೀಸರು ಮತ್ತು ಉಗ್ರಗಾಮಿಗಳ ನಡುವೆ ಎನ್‌ಕೌಂಟರ್ ಪ್ರಾರಂಭವಾಗಿದೆ. ಆದರೆ, ಇತ್ತೀಚಿನ ಮಾಹಿತಿಯ ಪ್ರಕಾರ, ಈ ಎನ್‌ಕೌಂಟರ್‌ನಲ್ಲಿ ಐವರು ಉಗ್ರರು ಹತರಾಗಿದ್ದಾರೆ ಮತ್ತು ಅವರನ್ನು ವಿದೇಶಿಯರು ಎಂದು ಗುರುತಿಸಲಾಗಿದೆ ಎಂದು ಕಾಶ್ಮೀರ ಎಡಿಜಿಪಿ ಟ್ವೀಟ್​ ಮಾಡಿದ್ದಾರೆ. ಗುಂಡಿನ ದಾಳಿ ನಡೆದ ಪ್ರದೇಶದಲ್ಲಿ ಜಂಟಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಳನುಸುಳುವಿಕೆ ವಿಫಲಗೊಳಿಸಿದ್ದ ಸೇನೆ: ಗುರುವಾರ (ಜೂನ್ 15) ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ಒಳನುಸುಳುವ ಯತ್ನವನ್ನು ಸೇನೆ ವಿಫಲಗೊಳಿಸಿತ್ತು. ಈ ವೇಳೆ ಗಡಿ ನಿಯಂತ್ರಣ ರೇಖೆಯ ಬಳಿಯಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿತ್ತು. ಇದರಲ್ಲಿ ಪಾಕಿಸ್ತಾನದಲ್ಲಿ ತಯಾರಿಸಿದ ಸ್ಟೀಲ್ ಕೋರ್ ಕಾರ್ಟ್ರಿಡ್ಜ್‌ಗಳು ಮತ್ತು ಔಷಧಿಗಳೂ ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಓದಿ: ಗಡಿ ನುಸುಳಲು ಯತ್ನಿಸಿದ ಮೂವರು ಉಗ್ರರು ಸೆರೆ, 10 ಕೆಜಿ ಐಇಡಿ ಸ್ಫೋಟಕ ವಶಕ್ಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.