ತಿರುವನಂತಪುರಂ (ಕೇರಳ) : ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬೆಲೆ ಖಂಡಿಸಿ ಕೇರಳದಲ್ಲಿ ಇಂದು ಮುಂಜಾನೆ ವಿವಿಧ ಕಾರ್ಮಿಕ ಸಂಘಗಳ ಜಂಟಿ ಸಮಿತಿಗಳು ಪ್ರತಿಭಟನೆಗೆ ಕರೆ ನೀಡಿದ್ದು, ಇದು ಸಾಮಾನ್ಯ ಜನರ ಮೇಲೆ ಪರಿಣಾಮ ಬೀರಿದೆ.
ಬೆಳಿಗ್ಗೆ 6 ರಿಂದ ಪ್ರತಿಭಟನೆ ಆರಂಭವಾಗಿದ್ದು, ರಾಜ್ಯದಾದ್ಯಂತ ಕೆಎಸ್‌ಆರ್‌ಟಿಸಿ ಬಸ್‌ಗಳು ಕಾರ್ಯನಿರ್ವಹಿಸಿಲ್ಲ. ಪ್ರತಿಭಟನೆಗೆ ಟ್ರಕ್‌ಗಳು ಮತ್ತು ಲಾರಿಗಳು ಸೇರಿದಂತೆ ವಾಣಿಜ್ಯ ವಾಹನಗಳು ಬೆಂಬಲ ನೀಡಿಲ್ಲ.
ಬಿಜೆಪಿ ಪರವಾದ ಭಾರತೀಯ ಮಜ್ದೂರ್ ಸಂಘವು ಪ್ರತಿಭಟನೆಯಿಂದ ದೂರ ಉಳಿದಿದ್ದರೆ, ಭಾರತೀಯ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಐಎನ್‌ಟಿಯುಸಿ) ಮತ್ತು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಸೇರಿದಂತೆ ಇತರ ಎಲ್ಲ ಪ್ರಮುಖ ಕಾರ್ಮಿಕ ಸಂಘಗಳು ಪ್ರತಿಭಟನೆಗೆ ಬೆಂಬಲ ನೀಡಿದ್ದವು.
ಮಂಗಳವಾರ ನಿಗದಿಯಾಗಿದ್ದ ಎಲ್ಲ ಪರೀಕ್ಷೆಗಳನ್ನು ದಕ್ಷಿಣ ರಾಜ್ಯದಲ್ಲಿ ಮುಂದೂಡಲಾಗಿದೆ. ಎಸ್‌ಎಸ್‌ಎಲ್‌ಸಿ, ಪ್ಲಸ್ ಟು, ವಿಎಚ್‌ಎಸ್‌ಸಿ ಪರೀಕ್ಷೆಗಳನ್ನು ಸಹ ಮಾರ್ಚ್ 8ಕ್ಕೆ ಮರು ನಿಗದಿಪಡಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಎಪಿಜೆ ಅಬ್ದುಲ್ ಕಲಾಂ ತಂತ್ರಜ್ಞಾನ ವಿಶ್ವವಿದ್ಯಾಲಯ ಮತ್ತು ಕೇರಳ, ಕೊಚ್ಚಿ, ಕಣ್ಣೂರು ಮತ್ತು ಮಹಾತ್ಮ ಗಾಂಧಿ ವಿಶ್ವವಿದ್ಯಾಲಯಗಳು ಸಹ 12 ಗಂಟೆಗಳ ಕಾಲ ನಡೆಯುವ ವಾಹನ ಮುಷ್ಕರವನ್ನು ಗಮನದಲ್ಲಿಟ್ಟುಕೊಂಡು ನಿಗದಿಯಾಗಿದ್ದ ಎಲ್ಲ ಪರೀಕ್ಷೆಗಳನ್ನು ಮುಂದೂಡಿದೆ.