ETV Bharat / bharat

ಯುವತಿಯರಿಗೆ ನಡುರಸ್ತೆಯಲ್ಲೇ ಕಿರುಕುಳ ನೀಡಿದ ಪುಂಡರು... ವಿಡಿಯೋ ವೈರಲ್​

ಈಶಾನ್ಯ ರಾಜ್ಯದ ಯುವತಿಯರಿಗೆ ದೆಹಲಿಯಲ್ಲಿ ಕಿರುಕುಳ ನೀಡಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್​ ಆಗಿದೆ.

NORTH EAST GIRLS MOLESTED IN DELHI
NORTH EAST GIRLS MOLESTED IN DELHI
author img

By

Published : Jul 21, 2021, 8:12 PM IST

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಈಶಾನ್ಯ ರಾಜ್ಯದ ಕೆಲವು ಯುವತಿಯರಿಗೆ ಕಿರುಕುಳ ನೀಡಿರುವ ವಿಡಿಯೋ ವೈರಲ್​ ಆಗಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ಈಶಾನ್ಯ ರಾಜ್ಯದ ಯುವತಿಯರಿಗೆ ಕಿರುಕುಳ ನೀಡಿದ ಪುಂಡರು

ಈಶಾನ್ಯ ರಾಜ್ಯದ ಯುವತಿಯರು ರಾತ್ರಿ ವೇಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪುಂಡರು ನಿಮ್ಮ ರೇಟ್​ ಎಷ್ಟು? ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಅವರನ್ನು ಎಳೆದಾಡಿರುವ ಘಟನೆಯೂ ಸಹ ನಡೆದಿದೆ. ಘಟನೆಯ ವಿಡಿಯೋವನ್ನು ಯುವತಿಯೋರ್ವಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಮಾಡಲು ಮುಂದಾಗುತ್ತಿದ್ದಂತೆ ಅವರು ಕ್ಷಮೆಯಾಚನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಸುಮಾರು 10 ನಿಮಿಷಗಳ ವಿಡಿಯೋ ವೈರಲ್​ ಆಗುತ್ತಿದ್ದಂತೆ ಮಹಿಳಾ ಆಯೋಗ ಎಚ್ಚೆತ್ತುಕೊಂಡಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ.

ಇದನ್ನೂ ಓದಿ: ವರದಕ್ಷಿಣೆಗೆ ಪೀಡಿಸಿ ಪತ್ನಿಗೆ ಆ್ಯಸಿಡ್‌ ಕುಡಿಸಿದ ಪತಿ: ಇಂಥ ಕ್ರೌರ್ಯಕ್ಕೆ ಕೊನೆಯೆಂದು?

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ವಾತಿ ಮಲಿವಾಲ್​, ಇದೊಂದು ಗಂಭೀರ ಘಟನೆಯಾಗಿದ್ದು, ಪ್ರಕರಣದ ಬಗ್ಗೆ ದೂರು ದಾಖಲು ಮಾಡಿಕೊಂಡು ಪೊಲೀಸರು ತನಿಖೆ ನಡೆಸಬೇಕು ಎಂದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.