ಉನ್ನಾವೋ(ಉತ್ತರ ಪ್ರದೇಶ): ಉನ್ನಾವೋ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರ ಆವರಣದಲ್ಲಿ ಶನಿವಾರ ಬೆಳಗ್ಗೆ ನರ್ಸ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯಾಗುವ ಮುನ್ನ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಸಂತ್ರಸ್ತೆಯ ಕುಟುಂಬಸ್ಥರು ತಿಳಿಸಿದ್ದಾರೆ. ಯುವತಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕುಟುಂಬ ಸದಸ್ಯರ ಪ್ರಕಾರ, ಈ ಘಟನೆಯ ಒಂದು ದಿನದ ಮೊದಲು ಆಕೆ ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು.
ಇಲ್ಲಿನ ನ್ಯೂ ಜೀವನ್ ಆಸ್ಪತ್ರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನಾವೋ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಶಿ ಶೇಖರ್ ಸಿಂಗ್ ಮಾಹಿತಿ ನೀಡಿದರು.
ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ