ETV Bharat / bharat

ನರ್ಸಿಂಗ್ ವಿದ್ಯಾರ್ಥಿನಿ ಅಪಹರಿಸಿ ಅತ್ಯಾಚಾರ: ಅಂತ್ಯಸಂಸ್ಕಾರಕ್ಕೆ ಬಂದಿದ್ದ ಕಾಮುಕರ ಕೃತ್ಯ - ಉತ್ತರಾಖಂಡದ ಕಾಶಿಪುರ

ಉತ್ತರಾಖಂಡದ ಕಾಶಿಪುರದಲ್ಲಿ ತನ್ನ ಸ್ನೇಹಿತನೊಂದಿಗೆ ಮನೆಗೆ ಹಿಂದಿರುಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಆರೋಪಿಗಳು ನರ್ಸಿಂಗ್ ವಿದ್ಯಾರ್ಥಿನಿ ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ.

nursing-student-raped-by-two-drunken-bikers-in-uttarakhand
ನರ್ಸಿಂಗ್ ವಿದ್ಯಾರ್ಥಿನಿಯ ಅಪಹರಿಸಿ ಅತ್ಯಾಚಾರ: ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ಕಾಮುಕರ ಕೃತ್ಯ
author img

By

Published : Dec 2, 2022, 9:52 PM IST

ಕಾಶಿಪುರ (ಉತ್ತರಾಖಂಡ): ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿದ ಘಟನೆ ಉತ್ತರಾಖಂಡದ ಕಾಶಿಪುರದಲ್ಲಿ ನಡೆದಿದ್ದು, ಇಬ್ಬರು ಉತ್ತರ ಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಅಫ್ಜಲ್‌ಗಢ್ ನಿವಾಸಿಗಳಾದ ಗುರ್ವಿಂದರ್ ಗುರಿ ಮತ್ತು ಜಸ್ವಂತ್ ಅಲಿಯಾಸ್ ವಿಕ್ಕಿ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಈ ಕಾಮುಕರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿ ಎಂದು ಬಂದು ಈ ದುಷ್ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ನೆರೆಮನೆಯ ಯುವಕನ ಮೇಲೆ ಸುಳ್ಳು ಅತ್ಯಾಚಾರ ಆರೋಪ: 5 ವರ್ಷದ ನಂತರ ಡಿಎನ್ಎ ಪರೀಕ್ಷೆಯಲ್ಲಿ ಸತ್ಯಾಂಶ ಬಯಲು

ನವೆಂಬರ್ 29ರಂದು ಕಾಲೇಜಿನಿಂದ ನರ್ಸಿಂಗ್ ವಿದ್ಯಾರ್ಥಿನಿಯು ತನ್ನ ಸ್ನೇಹಿತ ಶಿವಂನೊಂದಿಗೆ ಮನೆಗೆ ಹಿಂದಿರುಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಆರೋಪಿಗಳು ತನ್ನನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಗಳ ಬೈಕ್‌ನ ನಂಬರ್ ಪ್ಲೇಟ್ ಸಮೇತ ಸಂತ್ರಸ್ತೆ ದೂರು ಕೊಟ್ಟಿದ್ದರು.

ಮಾರ್ಗ ಮಧ್ಯೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಶಿವಂ ಅವರನ್ನು ಬೆದರಿಸಿ, ಸಂತ್ರಸ್ತೆಯನ್ನು ಬೈಕ್‌ನಲ್ಲಿ ಅಪಹರಿಸಿ ಜಸ್ಪುರದ ನಿರ್ಜನ ಕಬ್ಬಿನ ಗದ್ದೆಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದಾರೆ. ಈ ಕೃತ್ಯಕ್ಕೂ ಮುನ್ನ ಆರೋಪಿಗಳು ಮದ್ಯ ಸೇವಿಸಿದ್ದರು.

ಅಲ್ಲದೇ, ಮರು ದಿನ ಬೆಳಗ್ಗೆ ಜಸ್ಪುರ್ ಬಸ್ ನಿಲ್ದಾಣದ ಬಳಿ ಸಂತ್ರಸ್ತೆಯನ್ನು ಬಿಟ್ಟು ಹೋಗಿದ್ದಾರೆ ಎಂದು ತನಿಖೆಯಲ್ಲಿ ಗೊತ್ತಾಗಿದೆ. ಸದ್ಯ ಈ ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕಾಶಿಪುರ ಎಸ್‌ಪಿ ಅಭಯ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ತಂದೆಯಿಂದ 50 ಲಕ್ಷ ಹಣ ವಸೂಲಿ ಮಾಡಲು ಅಪಹರಣದ ಕಥೆ ಕಟ್ಟಿದ ಮಗ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.