ಭುವನೇಶ್ವರ, ಒಡಿಶಾ: ಕೋವಿಡ್ ಎಲ್ಲೆಡೆಯಲ್ಲೂ ಸಾಕಷ್ಟು ಸಂಕಷ್ಟ ಸೃಷ್ಟಿಸಿದ್ದು, ಕೊರೊನಾದಿಂದ ತಂದೆ ತಾಯಿಗಳನ್ನು ಕಳೆದುಕೊಂಡು ಅನಾಥರಾದ ಮಕ್ಕಳ ನೆರವಿಗೆ ಒಡಿಶಾ ಸರ್ಕಾರ ಮುಂದಾಗಿದೆ.
ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ 'ಆಶೀರ್ಬಾದ್' ಯೋಜನೆಯನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಈ ಯೋಜನೆಯಡಿಯಲ್ಲಿ ತಂದೆ ಅಥವಾ ತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ ಒಂದೂವರೆ ಸಾವಿರ ರೂಪಾಯಿ ಹಣಕಾಸಿನ ನೆರವು ನೀಡಲಾಗುತ್ತದೆ.
ಘೋಷಣೆಯಂತೆ ಕೋವಿಡ್ನಿಂದ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ ಎರಡೂವರೆ ಸಾವಿರ ರೂಪಾಯಿ ನೀಡಲಾಗುತ್ತದೆ. 2020 ಏಪ್ರಿಲ್ 1 ನಂತರದಲ್ಲಿ ಮೃತಪಟ್ಟವರ ಮಕ್ಕಳಿಗೆ ಈ ಯೋಜನೆ ಅನ್ವಯಿಸಲಿದೆ.
ಇದನ್ನೂ ಓದಿ: ಬಾಂಗ್ಲಾ ಯುವತಿ ಅತ್ಯಾಚಾರ ಪ್ರಕರಣ: ಹುಡುಗಿಯರೊಂದಿಗೆ ಅರೆನಗ್ನ ಡಾನ್ಸ್ ವಿಡಿಯೋ ಪತ್ತೆ!
ಅನಾಥರಾದ ಮಕ್ಕಳಿಗೆ 18 ವರ್ಷ ತುಂಬುವವರೆಗೆ ಅವರ ಪೋಷಕರ ಖಾತೆಗೆ ಹಣ ಜಮೆ ಮಾಡಲಾಗುತ್ತದೆ. ಒಂದು ವೇಳೆ ಅನಾಥ ಮಗುವನ್ನು ಯಾರಾದರೂ ದತ್ತು ಪಡೆದಿದ್ದರೆ ಈ ಯೋಜನೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.