ಒಡಿಶಾ: ರಾಜ್ಯದಲ್ಲಿ ಕೊರೊನಾ ಸಂಬಂಧಿತ ಸುದ್ದಿಗಳನ್ನು ಇಂಚಿಂಚಾಗಿ ಜನರಿಗೆ ತಲುಪಿಸುವ ಕೆಲಸ ಮಾಡುತ್ತಿರುವ ಪತ್ರಕರ್ತರನ್ನು ಒಡಿಶಾ ಸರ್ಕಾರ ಮುಂಚೂಣಿ ಕಾರ್ಯಕರ್ತರು ಎಂದು ಘೋಷಣೆ ಮಾಡಿದೆ.
"ಕೊರೊನಾ ಬಗ್ಗೆ ಹಗಲು ರಾತ್ರಿ ಎನ್ನದೆ ಸುದ್ದಿ ಪ್ರಸಾರ ಮಾಡುವ ಮತ್ತು ಜಾಗೃತಿ ಮೂಡಿಸುತ್ತಿರುವ ಪತ್ರಕರ್ತರು ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಮುಂಚೂಣಿ ಕಾರ್ಯಕರ್ತರು ಎಂದು ಘೋಷಿಸಲಾಗಿದೆ" ಎಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.
ಇದನ್ನು ಓದಿ: 14 ದಿನಗಳ ಲಾಕ್ಡೌನ್ ಘೋಷಿಸಿದ ಒಡಿಶಾ
ಮೇ 5ರಿಂದ ಮೇ 16ರವರೆಗೆ 14 ದಿನಗಳ ಕಾಲ ಲಾಕ್ಡೌನ್ ಘೋಷಿಸಿ ಒಡಿಶಾ ಸರ್ಕಾರ ಆದೇಶಿಸಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳ ನಿಯಂತ್ರಣಕ್ಕಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ.