ಭುವನೇಶ್ವರ (ಒಡಿಶಾ): ದೇಶದ ವಿವಿಧ ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳು ಪುನಾರಂಭಗೊಳ್ಳುತ್ತಿವೆ. ಇದರ ಬೆನ್ನಲ್ಲೇ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮಹತ್ವದ ಆದೇಶ ಹೊರಹಾಕಿದ್ದಾರೆ.
ಇದನ್ನೂ ಓದಿ: 64.98 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಸಿದ ಒಡಿಶಾ ಸಿಎಂ
ಒಡಿಶಾದಲ್ಲಿನ ಮೆಟ್ರಿಕ್ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಮನ್ನಾ ಮಾಡಿ ಆದೇಶ ಹೊರಡಿಸಿದ್ದು, ಇದರಿಂದ 6 ಲಕ್ಷ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ. ಮೆಟ್ರಿಕ್ಯುಲೇಷನ್ ಪರೀಕ್ಷೆಗಳು ಹಾಗೂ ವಾರ್ಷಿಕ ಪ್ರೌಢ ಶಾಲಾ ಪ್ರಮಾಣಪತ್ರ(ಎಚ್ಎಸ್ಬಿ) ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಈ ಆದೇಶ ಅನ್ವಯವಾಗಲಿದೆ.
ರಾಜ್ಯ ಶಿಕ್ಷಣ ಮಂಡಳಿ ಇದಕ್ಕೆ ಸಂಬಂಧಿಸಿದಂತೆ ತಕ್ಷಣವೇ ಎಲ್ಲ ಶಾಲೆಗಳಿಗೆ ಸುತ್ತೋಲೆ ಕಳುಹಿಸಲಿದೆ ಎಂದು ನವೀನ್ ಪಟ್ನಾಯಕ್ ತಿಳಿಸಿದ್ದಾರೆ.