ನಾಯಗಢ(ಒಡಿಶಾ): ಕೊರೊನಾ ಸೋಂಕು ತಗುಲಿರುವ ಸುದ್ದಿ ಕೇಳುತ್ತಿದ್ದಂತೆ ಅನೇಕರು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆ ದೇಶದಲ್ಲಿ ನಡೆಯುತ್ತಿದ್ದು, ಇದೀಗ ಅಂತಹ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಕೋವಿಡ್ ಪರೀಕ್ಷೆ ಪಾಸಿಟಿವ್ ಬರುತ್ತಿದ್ದಂತೆ ದಂಪತಿ ಒಡಿಶಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿ ಮತ್ತು ಅವರ ಮಗ ಕೋವಿಡ್-19 ಪಾಸಿಟಿವ್ ಬಂದಿದೆ. ಮಗ ಪುರಿಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ದಂಪತಿ ಮನೆಯಲ್ಲಿ ಪ್ರತ್ಯೇಕವಾಗಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಬಂಗಾಳ ಚುನಾವಣೆ: ಗಣಿ ಖಾನ್ ಭದ್ರಕೋಟೆ ಮಾಲ್ಡಾ ಕಾಂಗ್ರೆಸ್ಗೆ ಒಲಿಯುತ್ತಾ?
ಕೋವಿಡ್ ಪರೀಕ್ಷೆ ಪಾಸಿಟಿವ್ ಬರುತ್ತಿದ್ದಂತೆ ದಂಪತಿಗಳು ಖಿನ್ನತೆಗೊಳಗಾಗಿದ್ದರು. ಇಂದು ಬೆಳಗ್ಗೆಯಿಂದ ಮನೆಯಲ್ಲಿ ಯಾವುದೇ ರೀತಿಯ ಚಟುವಟಿಕೆ ಬಾರದ ಕಾರಣ ಒಳಗೆ ಹೋಗಿ ನೋಡಿದಾಗ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.