ETV Bharat / bharat

ಸಾಮೂಹಿಕ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಶಾಲಾ ಕಟ್ಟಡದ ಮೇಲಿಂದ ಜಿಗಿದ ಬಾಲಕಿ - ಅತ್ಯಾಚಾರರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಒಡಿಶಾ ಬಾಲಕಿಗೆ ಗಾಯ

ಸಾಮೂಹಿಕ ಅತ್ಯಾಚಾರ ಯತ್ನದಿಂದ ತಪ್ಪಿಸಿಕೊಳ್ಳಲು ಬಾಲಕಿ ಛಾವಣಿಯಿಂದ ಜಿಗಿದಿರುವ ಘಟನೆ ಒಡಿಶಾದ ಜಾಜ್​ಪುರ ಜಿಲ್ಲೆಯಲ್ಲಿ ನಡೆದಿದೆ.

Odisha girl jumps off roof to escape gang rape, Odisha girl injured over escape gang rape, Odisha crime news, ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಶಾಲಾ ಕಟ್ಟಡದ ಮೇಲಿಂದ ಜಿಗಿದ ಒಡಿಶಾ ಬಾಲಕಿ, ಅತ್ಯಾಚಾರರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಒಡಿಶಾ ಬಾಲಕಿಗೆ ಗಾಯ, ಒಡಿಶಾ ಅಪರಾಧ ಸುದ್ದಿ,
ಸಾಮೂಹಿಕ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಶಾಲಾ ಕಟ್ಟಡದ ಮೇಲಿಂದ ಜಿಗಿದ ಬಾಲಕಿ
author img

By

Published : Jul 19, 2022, 1:00 PM IST

ಜಾಜ್‌ಪುರ(ಒಡಿಶಾ): ಐವರು ಆರೋಪಿಗಳಿಂದ ಸಾಮೂಹಿಕ ಅತ್ಯಾಚಾರ ಯತ್ನ ತಪ್ಪಿಸಿಕೊಳ್ಳುವ ಸಲುವಾಗಿ ಬಾಲಕಿಯೊಬ್ಬಳು ಶಾಲಾ ಕಟ್ಟಡದ ಮೇಲ್ಛಾವಣಿಯಿಂದ ಹಾರಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರಿ ಮಳೆಯಾಗುತ್ತಿದ್ದುದರಿಂದ ಶಾಲೆಯಲ್ಲಿ ಆಶ್ರಯ ಪಡೆಯುವಂತೆ ಬಾಲಕಿ ಮತ್ತು ಆಕೆಯ ಸಹೋದರನಿಗೆ ಸಲಹೆ ನೀಡಿದ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ರಾತ್ರಿ ಬಾಲಕಿ ತನ್ನ ಸಹೋದರನೊಂದಿಗೆ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಳು. ಬಸ್​ನಿಂದ ಕೆಳಗಿಳಿದಾಗ ಆ ಪ್ರದೇಶದಲ್ಲಿ ಜೋರು ಮಳೆಯಾಗುತ್ತಿತ್ತು. ಐವರ ಗುಂಪು ಶಾಲಾ ಕಟ್ಟಡದಲ್ಲಿ ಉಳಿದುಕೊಳ್ಳಿ, ಮಳೆ ನಿಂತ ಬಳಿಕ ನಿಮ್ಮ ಸ್ಥಳಕ್ಕೆ ಹೋಗಬಹುದು ಎಂದು ಸಲಹೆ ನೀಡಿದ್ದಾರೆ. ಅವರ ಸಲಹೆ ಸ್ವೀಕರಿಸಿದ ಸಹೋದರ ಮತ್ತು ಸಹೋದರಿ ಅಲ್ಲಿಯೇ ಆಶ್ರಯ ಪಡೆದಿದ್ದಾರೆ. ಆದರೆ ತಡರಾತ್ರಿ ವಾಪಸ್ ಬಂದು ಸಹೋದರನಿಗೆ ಥಳಿಸಿ ಆತನನ್ನು ಓಡಿಸಿದ್ದಾರೆ. ಬಳಿಕ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಬಾಲಕಿ ಶಾಲೆಯ ಕಟ್ಟಡದ ಮೇಲ್ಛಾವಣಿಯ ಮೇಲೆ ಓಡಿ ಹೋಗಿ ಅಲ್ಲಿಂದ ಜಿಗಿದಿದ್ದಾಳೆ.

ಸಹೋದರನ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಗ್ರಾಮಕ್ಕೆ ಆಗಮಿಸಿ ಬಾಲಕಿಯನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ. ಸಂತ್ರಸ್ತೆಯ ಸಹೋದರನ ಹೇಳಿಕೆ ಆಧರಿಸಿ ಐವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ಮಗಳ ಮೇಲೆಯೇ ಅತ್ಯಾಚಾರ ಆರೋಪ: ನನ್ನ ಗೌರವ ಹಿಂದಿರುಗಿಸುವವರ‍್ಯಾರು ಎಂದು ಪ್ರಶ್ನಿಸಿದ 'ಮುಗ್ದ' ತಂದೆ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.