ETV Bharat / bharat

ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ: ಪೊಲೀಸರಿಂದ ಕಠಿಣ ಕಾನೂನು ಕ್ರಮದ ಎಚ್ಚರಿಕೆ - ಒಡಿಶಾ ಪೊಲೀಸರು

ಒಡಿಶಾದ ಬಾಲಸೋರ್‌ ತ್ರಿವಳಿ ರೈಲು ಅಪಘಾತಕ್ಕೆ ಸಂಬಂಧಿಸಿದ ಇಂತಹ ಸುಳ್ಳು ಮತ್ತು ದುರುದ್ದೇಶಪೂರಿತ ಪೋಸ್ಟ್‌ಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ಪೊಲೀಸರು ಸೂಚಿಸಿದ್ದಾರೆ.

Odisha police warns against bid to create communal disharmony using train tragedy
ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ: ಪೊಲೀಸರಿಂದ ಕಠಿಣ ಕಾನೂನು ಕ್ರಮದ ಎಚ್ಚರಿಕೆ
author img

By

Published : Jun 4, 2023, 5:43 PM IST

ಭುವನೇಶ್ವರ್ (ಒಡಿಶಾ): ದೇಶ ಕಂಡ ಭೀಕರ ರೈಲು ದುರಂತದಲ್ಲಿ ಒಂದಾದ ಒಡಿಶಾದ ಬಾಲಸೋರ್‌ ತ್ರಿವಳಿ ರೈಲು ಅಪಘಾತಕ್ಕೆ ಕೋಮು ಬಣ್ಣ ನೀಡುವ ವದಂತಿಗಳನ್ನು ಹರಡುವುದನ್ನು ನಿಲ್ಲಿಸುವಂತೆ ಒಡಿಶಾ ಪೊಲೀಸರು ಭಾನುವಾರ ಮನವಿ ಮಾಡಿದ್ದಾರೆ. ಇದೇ ವೇಳೆ ಕೋಮು ಸೌಹಾರ್ದತೆ ಕದಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದೂ ಎಂದು ಪೊಲೀಸರು ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ನಡೆದ ಒಡಿಶಾದ ಬಾಲಸೋರ್‌ ಜಿಲ್ಲೆಯ ಬಹನಾಗಾ ಬಜಾರ್​ ರೈಲ್ವೆ ನಿಲ್ದಾಣ ಸಮೀಪ ನಡೆದ ಮೂರು ರೈಲುಗಳ ಅಪಘಾತದಲ್ಲಿ 275 ಜನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅಂದಾಜು 1,175ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದರ ನಡುವೆ ಸಾಮಾಜಿಕ ಜಾಲತಾಣದಲ್ಲಿ ಈ ರೈಲು ದುರಂತಕ್ಕೆ ಕೋಮು ಬಣ್ಣ ಬಳಿಯುವ ಕೆಲಸವನ್ನು ಕೆಲ ಕಿಡಿಗೇಡಿಗಳು ಮಾಡುತ್ತಿದ್ದಾರೆ. ಹೀಗಾಗಿ ಇದರಿಂದ ಎಚ್ಚೆತ್ತ ಒಡಿಶಾ ಪೊಲೀಸರು ಸುಳ್ಳು ವದಂತಿಗಳು ಹರಡುವುದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: ರೈಲು ದುರಂತದಲ್ಲಿ ಮೃತರ ಸಂಖ್ಯೆ 288 ಅಲ್ಲ, 275.. ಗಾಯಗೊಂಡವರು 1,175 ಮಂದಿ: ಒಡಿಶಾ ಸರ್ಕಾರ

ಪೊಲೀಸರ ಟ್ವೀಟ್​ನಲ್ಲಿ ಏನಿದೆ?: ಈ ಬಗ್ಗೆ ಒಡಿಶಾ ಸರ್ಕಾರದ ಪೊಲೀಸ್​ ಇಲಾಖೆಯ ಅಧಿಕೃತ ಟ್ವಟರ್​ ಖಾತೆಯಲ್ಲಿ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ''ಕೆಲವು ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ಅಪಘಾತಕ್ಕೆ ಕೋಮು ಬಣ್ಣವನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದು ಅತ್ಯಂತ ದುರದೃಷ್ಟಕರ'' ಎಂದು ಟ್ವೀಟ್ ಮಾಡಲಾಗಿದೆ. ಮುಂದುವರೆದು, ''ಇಂತಹ ಸುಳ್ಳು ಮತ್ತು ದುರುದ್ದೇಶಪೂರಿತ ಪೋಸ್ಟ್‌ಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ನಾವು ಸಂಬಂಧಪಟ್ಟ ಎಲ್ಲರಿಗೂ ಮನವಿ ಮಾಡುತ್ತೇವೆ. ಅಲ್ಲದೇ, ವದಂತಿಗಳನ್ನು ಹರಡುವ ಮೂಲಕಕೋಮು ಸೌಹಾರ್ದತೆ ಕದಡಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಕೈಗೊಳ್ಳಲು ಪ್ರಾರಂಭಿಸಲಾಗುವುದು" ಎಂದು ಟ್ವೀಟ್​ ಮಾಡಿ ಪೊಲೀಸ್​ ಇಲಾಖೆ ಎಚ್ಚರಿಕೆ ನೀಡಿದೆ.

  • It has come to notice that some social media handles are mischievously giving communal colour to the tragic train accident at Balasore. This is highly unfortunate.

    Investigation by the GRP, Odisha into the cause and all other aspects of the accident is going on.

    — Odisha Police (@odisha_police) June 4, 2023 " class="align-text-top noRightClick twitterSection" data=" ">

ರೈಲು ದುರಂತದಲ್ಲಿ ಅನೇಕ ಜನರು ತಮ್ಮ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ. ಮತ್ತೊಂದೆಡೆ, ಕೆಲವು ಕಿಡಿಗೇಡಿಗಳು ನಿರ್ದಿಷ್ಟ ಸಮುದಾಯದೊಂದಿಗೆ ರೈಲು ಅಪಘಾತದ ಸ್ಥಳದ ಸಮೀಪವಿರುವ ರಚನೆಯನ್ನು ಬೆರೆಸಿ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶ ಹರಡುವ ಮೂಲಕ ವಿಕೃತಿ ಮರೆಯುತ್ತಿದ್ದಾರೆ. ಈ ಕಿಡಿಗೇಡಿತನದ ಕೃತ್ಯಕ್ಕೆ ಇತರ ಸಾಮಾಜಿಕ ಜಾಲತಾಣಗಳ ಬಳಕೆದಾರರಿಂದ ತೀವ್ರ ಖಂಡನೆ ವ್ಯಕ್ತವಾಗಿದೆ.

ದುರಂತಕ್ಕೆ ಕಾರಣವಾದ ವ್ಯಕ್ತಿಗಳ ಗುರುತು: ಶುಕ್ರವಾರ ರಾತ್ರಿ ಸಂಭವಿಸಿದ ರೈಲು ದುರಂತದ ಸ್ಥಳದಲ್ಲಿ ಶನಿವಾರ ರಕ್ಷಣಾ ಕಾರ್ಯ ಪೂರ್ಣಗೊಂಡಿದೆ. ರೈಲ್ವೆ ಹಳಿಗಳ ಸರಿಪಡಿಸುವ ಮತ್ತು ರೈಲು ಕಾರ್ಯಾಚರಣೆಯನ್ನು ಪುನಾರಂಭಿಸಲು ಅವಶೇಷಗಳನ್ನು ತೆಗೆದುಹಾಕುವ ಕಾರ್ಯ ನಡೆಯುತ್ತಿದೆ. ಇಂದು ಸಹ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ಅಲ್ಲದೇ, ಈ ದುರಂತದ ಬಗ್ಗೆ ಮಾತನಾಡಿದ ಸಚಿವ ಅಶ್ವಿನಿ ವೈಷ್ಣವ್, ಒಡಿಶಾ ತ್ರಿವಳಿ ರೈಲು ದುರಂತಕ್ಕೆ ಕಾರಣ ಮತ್ತು ಅದಕ್ಕೆ ಕಾರಣವಾದ ವ್ಯಕ್ತಿಗಳನ್ನು ಗುರುತಿಸಲಾಗಿದೆ. ಪ್ರಾಥಮಿಕ ತನಿಖಾ ಮಾಹಿತಿ ಪ್ರಕಾರ ಎಲೆಕ್ಟ್ರಾನಿಕ್​ ಇಂಟರ್​ಲಾಕಿಂಗ್​ ಸಿಸ್ಟಮ್​ (ಹಳಿ ಬದಲಿಸುವ ವ್ಯವಸ್ಥೆ) ಸಮಸ್ಯೆಯಿಂದಾಗಿ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಹಳಿಗಳ ಮರುಜೋಡಣೆ ಕಾರ್ಯದಿಂದ ಭರದಿಂದ ಸಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಲೆಕ್ಟ್ರಾನಿಕ್​ ಇಂಟರ್​ಲಾಕಿಂಗ್​ ಸಿಸ್ಟಮ್ ಸಮಸ್ಯೆಯಿಂದ ರೈಲು ದುರಂತ: ಸಚಿವ ಅಶ್ವಿನಿ ವೈಷ್ಣವ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.