ಭುವನೇಶ್ವರ್ (ಒಡಿಶಾ): ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ಕನಿಷ್ಠ 275 ಮಂದಿ ಸಾವನ್ನಪ್ಪಿದ್ದಾರೆ ಎಂದು ಒಡಿಶಾ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದೆ. ಇನ್ನು ಘಟನೆಯಲ್ಲಿ 1000 ಕ್ಕೂ ಹೆಚ್ಚು ವ್ಯಕ್ತಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
-
VIDEO | Railway DRM Khurda Rd Rinkesh Roy provides updates on the passengers injured in #OdishaRailTragedy. pic.twitter.com/4Xy21tPhjr
— Press Trust of India (@PTI_News) June 5, 2023 " class="align-text-top noRightClick twitterSection" data="
">VIDEO | Railway DRM Khurda Rd Rinkesh Roy provides updates on the passengers injured in #OdishaRailTragedy. pic.twitter.com/4Xy21tPhjr
— Press Trust of India (@PTI_News) June 5, 2023VIDEO | Railway DRM Khurda Rd Rinkesh Roy provides updates on the passengers injured in #OdishaRailTragedy. pic.twitter.com/4Xy21tPhjr
— Press Trust of India (@PTI_News) June 5, 2023
ಆದರೆ, ಮೃತಪಟ್ಟ 275 ಜನರಲ್ಲಿ ಇನ್ನೂ 101 ಮೃತದೇಹಗಳ ಗುರುತು ಪತ್ತೆಯಾಗಿಲ್ಲ. ಆ ಮೃತದೇಹಗಳ ಪತ್ತೆಕಾರ್ಯ ಮುಂದುವರೆದಿದೆ ಎಂದು ಈಸ್ಟರ್ನ್ ಸೆಂಟ್ರಲ್ ರೈಲ್ವೇಯ ವಿಭಾಗೀಯ ರೈಲ್ವೇ ಮ್ಯಾನೇಜರ್ ರಿಂಕೇಶ್ ರಾಯ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ಒಡಿಶಾದ ವಿವಿಧ ಆಸ್ಪತ್ರೆಗಳಲ್ಲಿ ಸುಮಾರು 200ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.
"ಅಪಘಾತದಲ್ಲಿ ಸುಮಾರು 1,100 ಜನರು ಗಾಯಗೊಂಡಿದ್ದಾರೆ, ಅದರಲ್ಲಿ ಸುಮಾರು 900 ಜನರನ್ನು ಚಿಕಿತ್ಸೆ ಪಡೆದು ಮನೆಗಳಿಗೆ ತೆರಳಿದ್ದಾರೆ. ಸುಮಾರು 200 ಜನರು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ 275 ಜನರಲ್ಲಿ 101 ಮೃತದೇಹಗಳ ಗುರುತು ಪತ್ತೆಯಾಗದೇ ಹಾಗೆ ಉಳಿದಿವೆ ಎಂದು ರಾಯ್ ತಿಳಿಸಿದ್ದಾರೆ.
ಇದನ್ನು ಓದಿ: ನವ ವಿವಾಹಿತನ ಬಲಿ ಪಡೆದ ಒಡಿಶಾ ರೈಲು ದುರಂತ: ಕುಟುಂಬಸ್ಥರ ಆಕ್ರಂದನ
ಎರಡು ಪ್ರಯಾಣಿಕ ರೈಲುಗಳು ಮತ್ತು ಸರಕು ಸಾಗಣೆ ರೈಲು ಒಳಗೊಂಡ ವಿನಾಶಕಾರಿ ಅಪಘಾತದಲ್ಲಿ ಕನಿಷ್ಠ 275 ಜನರ ಪ್ರಾಣವನ್ನು ಕಳೆದುಕೊಂಡಿದ್ದು, 1100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ದುರಂತ ವಿಶ್ವವನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು. ಈ ಕುರಿತು ಮಾತನಾಡಿರುವ ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಶನ್‌ನ ಆಯುಕ್ತ ವಿಜಯ್ ಅಮೃತ್ ಕುಲಂಗೆ, "ಭುವನೇಶ್ವರದಲ್ಲಿ ಇರಿಸಲಾಗಿರುವ ಒಟ್ಟು 193 ಶವಗಳಲ್ಲಿ 80 ಶವಗಳನ್ನು ಗುರುತಿಸಲಾಗಿದೆ. 55 ಶವಗಳನ್ನು ಸಂಬಂಧಿಕರಿಗೆ ಈಗಾಗಲೇ ಹಸ್ತಾಂತರಿಸಲಾಗಿದೆ. ಬಿಎಂಸಿಯ ಸಹಾಯವಾಣಿ ಸಂಖ್ಯೆಗೆ 200 ಕ್ಕೂ ಹೆಚ್ಚು ಕರೆಗಳು ಬಂದಿವೆ. ಮೃತ ದೇಹಗಳನ್ನು ಗುರುತಿಸಿ ಸಂಬಂಧಿಕರಿಗೆ ಹಸ್ತಾಂತರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಶಾಲಿಮಾರ್ - ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ನಿಂತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದಾಗ ಈ ಅಪಘಾತ ಸಂಭವಿಸಿದೆ. ಇದರಿಂದಾಗಿ ಹಲವಾರು ಬೋಗಿಗಳು ಪಕ್ಕದ ಟ್ರ್ಯಾಕ್ ಮೇಲೆ ಬಿದ್ದಿದ್ದವು. ಇದೇ ಸಂದರ್ಭದಲ್ಲಿ ಇನ್ನೊಂದು ಟ್ರ್ಯಾಕ್ನಲ್ಲಿ ಚಲಿಸುತ್ತಿದ್ದ ಯಶವಂತಪುರ ಹೌರಾ ಎಕ್ಸ್‌ಪ್ರೆಸ್, ಹಳಿ ತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಹೌರಾ ಎಕ್ಸ್ಪ್ರೆಸ್ನ ಕೊನೆಯ ಬೋಗಿಗಳು ಹಳಿ ತಪ್ಪಿದ್ದವು.
ಇದನ್ನು ಓದಿ:ಒಡಿಶಾ ರೈಲು ದುರಂತದಲ್ಲಿ 88 ಪ್ರಯಾಣಿಕರ ಪ್ರಾಣ ಉಳಿಸಿದ ಕೆಚ್ಚೆದೆಯ ವೀರರಿವರು!