ಚಂಡೀಗಢ(ಪಂಜಾಬ್): ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಹುದ್ದೆ ಅಲಂಕಾರ ಮಾಡಿದಾಗಿನಿಂದಲೂ ಭಗವಂತ್ ಮಾನ್ ಸದಾ ಒಂದಿಲ್ಲೊಂದು ಮಹತ್ವದ ಆದೇಶ ಹೊರಡಿಸುತ್ತಿದ್ದು, ಇದೀಗ ನಕಲಿ ಪದವಿ, ಫೇಕ್ ದಾಖಲಾತಿ ಮೇಲೆ ಸರ್ಕಾರಿ ಹುದ್ದೆ ಗಿಟ್ಟಿಸಿಕೊಂಡಿರುವ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಸಾರ್ವಜನಿಕ ಹಿತಾಸಕ್ತಿಯಿಂದ ಈಗಾಗಲೇ ಅನೇಕ ಮಹತ್ವದ ನಿರ್ಧಾರಗಳನ್ನು ಕೈಗೊಂಡಿರುವ ಮಾನ್ ಇದೀಗ ನಕಲಿ ಪದವಿ, ಪ್ರಮಾಣ ಪತ್ರ ನೀಡಿ ಸರ್ಕಾರಿ ಹುದ್ದೆ ಗಿಟ್ಟಿಸಿಕೊಂಡವರನ್ನು ಹುದ್ದೆಯಿಂದ ವಜಾಗೊಳಿಸಲು ಮುಂದಾಗಿದ್ದಾರೆ.
-
ਮੇਰੇ ਧਿਆਨ ਚ ਬਹੁਤ ਕੇਸ ਆਏ ਨੇ ਕਿ ਬਹੁਤ ਹੀ ਰਸੂਖਦਾਰ ਅਤੇ ਰਾਜਨੀਤਕ ਲੋਕਾਂ ਦੇ ਰਿਸ਼ਤੇਦਾਰ ਜਾਅਲੀ ਡਿਗਰੀਆਂ ਨਾਲ ਸਰਕਾਰੀ ਨੌਕਰੀਆਂ ਲੈ ਕੇ ਬੈਠੇ ਨੇ..ਜਲਦੀ ਹੀ ਪੰਜਾਬ ਦੇ ਲੋਕਾਂ ਦੇ ਟੈਕਸ ਦੇ ਇੱਕ -ਇੱਕ ਪੈਸੇ ਦਾ ਹਿਸਾਬ ਲੋਕਾਂ ਸਾਹਮਣੇ ਰੱਖਿਆ ਜਾਵੇਗਾ…
— Bhagwant Mann (@BhagwantMann) June 11, 2022 " class="align-text-top noRightClick twitterSection" data="
">ਮੇਰੇ ਧਿਆਨ ਚ ਬਹੁਤ ਕੇਸ ਆਏ ਨੇ ਕਿ ਬਹੁਤ ਹੀ ਰਸੂਖਦਾਰ ਅਤੇ ਰਾਜਨੀਤਕ ਲੋਕਾਂ ਦੇ ਰਿਸ਼ਤੇਦਾਰ ਜਾਅਲੀ ਡਿਗਰੀਆਂ ਨਾਲ ਸਰਕਾਰੀ ਨੌਕਰੀਆਂ ਲੈ ਕੇ ਬੈਠੇ ਨੇ..ਜਲਦੀ ਹੀ ਪੰਜਾਬ ਦੇ ਲੋਕਾਂ ਦੇ ਟੈਕਸ ਦੇ ਇੱਕ -ਇੱਕ ਪੈਸੇ ਦਾ ਹਿਸਾਬ ਲੋਕਾਂ ਸਾਹਮਣੇ ਰੱਖਿਆ ਜਾਵੇਗਾ…
— Bhagwant Mann (@BhagwantMann) June 11, 2022ਮੇਰੇ ਧਿਆਨ ਚ ਬਹੁਤ ਕੇਸ ਆਏ ਨੇ ਕਿ ਬਹੁਤ ਹੀ ਰਸੂਖਦਾਰ ਅਤੇ ਰਾਜਨੀਤਕ ਲੋਕਾਂ ਦੇ ਰਿਸ਼ਤੇਦਾਰ ਜਾਅਲੀ ਡਿਗਰੀਆਂ ਨਾਲ ਸਰਕਾਰੀ ਨੌਕਰੀਆਂ ਲੈ ਕੇ ਬੈਠੇ ਨੇ..ਜਲਦੀ ਹੀ ਪੰਜਾਬ ਦੇ ਲੋਕਾਂ ਦੇ ਟੈਕਸ ਦੇ ਇੱਕ -ਇੱਕ ਪੈਸੇ ਦਾ ਹਿਸਾਬ ਲੋਕਾਂ ਸਾਹਮਣੇ ਰੱਖਿਆ ਜਾਵੇਗਾ…
— Bhagwant Mann (@BhagwantMann) June 11, 2022
ಇದಕ್ಕೆ ಸಂಬಂಧಿಸಿದಂತೆ ಭಗವಂತ್ ಮಾನ್ ಟ್ವೀಟ್ ಮಾಡಿದ್ದು, ಅತ್ಯಂತ ಪ್ರಭಾವಿ ಮತ್ತು ರಾಜಕೀಯ ವ್ಯಕ್ತಿಗಳ ಸಂಬಂಧಿಕರು ನಕಲಿ ಪದವಿ ಪಡೆದುಕೊಂಡು, ಸರ್ಕಾರಿ ಉದ್ಯೋಗ ಪಡೆದುಕೊಂಡಿರುವ ಅನೇಕ ಪ್ರಕರಣಗಳು ನನ್ನ ಗಮನಕ್ಕೆ ಬಂದಿವೆ. ಶೀಘ್ರದಲ್ಲೇ ಅವರನ್ನ ಕೆಲಸದಿಂದ ವಜಾಗೊಳಿಸಲಾಗುವುದು. ರಾಜ್ಯದಲ್ಲಿ ನಿರುದ್ಯೋಗದಿಂದ ಬಳಲುತ್ತಿರುವ ಅಭ್ಯರ್ಥಿಗಳಿಗೆ ಈ ಕೆಲಸ ದೊರೆಯಲಿವೆ ಎಂದಿದ್ದಾರೆ. ಈ ಮೂಲಕ ನಕಲಿ ಪದವಿ ಪಡೆದ ಸರ್ಕಾರಿ ಉದ್ಯೋಗಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದು ಸ್ಪಷ್ಟವಾಗಿದೆ.
ಇದನ್ನೂ ಓದಿ: ಶಾಸಕರು ಎಷ್ಟು ಬಾರಿ ಗೆದ್ದರೂ ಒಂದೇ ಅವಧಿಗೆ ಪಿಂಚಣಿ: ಪಂಜಾಬ್ ಸಿಎಂ ಮಹತ್ವದ ನಿರ್ಧಾರ
ಅಕ್ರಮವಾಗಿ ಉದ್ಯೋಗ ಗಿಟ್ಟಿಸಿಕೊಂಡಿರುವ 25 ಸಾವಿರ ಉದ್ಯೋಗಿಗಳನ್ನ ಈಗಾಗಲೇ ಅಮಾನತುಗೊಳಿಸಿರುವ ಪಂಜಾಬ್ ಸಿಎಂ ಭಗವಂತ್ ಮಾನ್, ಅಸೆಂಬ್ಲಿ ನೇಮಕಾತಿ ಹಗರಣದ ಪ್ರಕರಣ ಸಹ ತನಿಖೆಗೆ ಆದೇಶ ನೀಡಿದ್ದಾರೆ. ಪಂಜಾಬ್ನಲ್ಲಿ ಭ್ರಷ್ಟಾಚಾರ ಹೋಗಲಾಡಿಸಲು ವಾಟ್ಸಪ್ ನಂಬರ್, ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳ ಮಾಡದಂತೆ ತಡೆ, ಶಾಸಕರಿಗೆ ಒಂದೇ ಅವಧಿಗೆ ಪಿಂಚಣಿ ಸೇರಿದಂತೆ ಅನೇಕ ಮಹತ್ವದ ನಿರ್ಧಾರ ಕೈಗೊಂಡಿರುವ ಭಗವಂತ್ ಮಾನ್, ಇದೀಗ ಮತ್ತೊಂದು ಕ್ರಮಕ್ಕೆ ಮುಂದಾಗಿದ್ದಾರೆ.