ನವದೆಹಲಿ: ಭಾರತದ ವ್ರೆಸ್ಲಿಂಗ್ ಫೆಡರೇಶನ್ (ಡಬ್ಲ್ಯುಎಫ್‌ಐ) ಹೊಸ ಮುಖ್ಯಸ್ಥ ಸಂಜಯ್ ಸಿಂಗ್ ಅವರ ಆಯ್ಕೆಗೆ ಕುಸ್ತಿಪಟುಗಳಿಂದ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಒಲಿಂಪಿಯನ್ ಸಾಕ್ಷಿ ಮಲಿಕ್ ಕುಸ್ತಿಗೆ ನಿವೃತ್ತಿ ಘೋಷಿಸಿದ ಒಂದು ದಿನದ ನಂತರ ತಾರಾ ಕುಸ್ತಿಪಟು ಬಜರಂಗ್ ಪೂನಿಯಾ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವ ಪದ್ಮಶ್ರೀಯನ್ನು ಹಿಂದಿರುಗಿಸುವ ನಿರ್ಧಾರಕ್ಕೆ ಬಂದಿದ್ದಾರೆ. "ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಮಂತ್ರಿ (ನರೇಂದ್ರ ಮೋದಿ) ಅವರಿಗೆ ಹಿಂದಿರುಗಿಸುತ್ತಿದ್ದೇನೆ. ಅದನ್ನು ಹೇಳಲು ಇದು ನನ್ನ ಪತ್ರ" ಎಂದು ಎಕ್ಸ್ ಪೋಸ್ಟ್ನಲ್ಲಿ ಬರೆದಿದ್ದಾರೆ.
-
मैं अपना पद्मश्री पुरस्कार प्रधानमंत्री जी को वापस लौटा रहा हूँ. कहने के लिए बस मेरा यह पत्र है. यही मेरी स्टेटमेंट है। 🙏🏽 pic.twitter.com/PYfA9KhUg9
— Bajrang Punia 🇮🇳 (@BajrangPunia) December 22, 2023 " class="align-text-top noRightClick twitterSection" data="
">मैं अपना पद्मश्री पुरस्कार प्रधानमंत्री जी को वापस लौटा रहा हूँ. कहने के लिए बस मेरा यह पत्र है. यही मेरी स्टेटमेंट है। 🙏🏽 pic.twitter.com/PYfA9KhUg9
— Bajrang Punia 🇮🇳 (@BajrangPunia) December 22, 2023मैं अपना पद्मश्री पुरस्कार प्रधानमंत्री जी को वापस लौटा रहा हूँ. कहने के लिए बस मेरा यह पत्र है. यही मेरी स्टेटमेंट है। 🙏🏽 pic.twitter.com/PYfA9KhUg9
— Bajrang Punia 🇮🇳 (@BajrangPunia) December 22, 2023
ಡಬ್ಲ್ಯುಎಫ್‌ಐ ಚುನಾವಣೆಯಲ್ಲಿ ಸಂಜಯ್ ಸಿಂಗ್ ಅವರು ಅನಿತಾ ಶೆರಾನ್ ಅವರನ್ನು ಸೋಲಿಸಿ ಗೆಲುವು ದಾಖಲಿಸಿದ್ದಾರೆ. ಸಂಜಯ್ ಸಿಂಗ್ ಮಾಜಿ ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರ ಆಪ್ತರಲ್ಲಿ ಒಬ್ಬರು. ಈ ಬೆಳವಣಿಗೆಯ ನಂತರ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ನಿರಾಶೆ ವ್ಯಕ್ತಪಡಿಸಿದ್ದರು. ಒಲಿಂಪಿಕ್ ಕ್ರೀಡೆಯನ್ನು ತ್ಯಜಿಸುವುದಾಗಿಯೂ ಸಾಕ್ಷಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.
ಪ್ರಧಾನಿ ಮೋದಿ ಅವರನ್ನು ಉಲ್ಲೇಖಿಸಿ ಬರೆದ ಪತ್ರದಲ್ಲಿ, "2019ರಲ್ಲಿ ನನಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಯಿತು. ಅಲ್ಲದೆ ಖೇಲ್ ರತ್ನ ಮತ್ತು ಅರ್ಜುನ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನನಗೆ ಈ ಗೌರವ ಸಿಕ್ಕಾಗ ತುಂಬಾ ಖುಷಿಯಾಗಿತ್ತು. ಜೀವನ ಯಶಸ್ವಿಯಾಗಿದೆ ಎಂದುಕೊಂಡಿದ್ದೆ. ಆದರೆ ಇಂದು ನಾನು ಅದಕ್ಕಿಂತ ಹೆಚ್ಚು ಅತೃಪ್ತಿ ಹೊಂದಿದ್ದೇನೆ. ಈ ಗೌರವಗಳು ನನ್ನನ್ನು ನೋಯಿಸುತ್ತಿವೆ."
"ಬೇಟಿ ಬಚಾವೋ ಬೇಟಿ ಪಡಾವೋ ಬ್ರ್ಯಾಂಡ್ ಅಂಬಾಸಿಡರ್ ಆಗಬೇಕಿದ್ದ ಹೆಣ್ಣು ಮಕ್ಕಳು ತಮ್ಮ ಆಟದಿಂದ ಹಿಂದೆ ಸರಿಯಬೇಕಾದ ಪರಿಸ್ಥಿತಿ ಬಂದೊದಗಿದೆ. ನಾವು ಗೌರವಾನ್ವಿತ ಕುಸ್ತಿಪಟುಗಳಾಗಿ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಮಹಿಳಾ ಕುಸ್ತಿಪಟುಗಳನ್ನು ಅವಮಾನಿಸಿದ ನಂತರ ನಾನು ನನ್ನ ಜೀವನವನ್ನು "ಗೌರವಾನ್ವಿತ" ಎಂದು ಬದುಕಲು ಸಾಧ್ಯವಾಗುವುದಿಲ್ಲ. ಅಂತಹ ಜೀವನವು ಜೀವನದುದ್ದಕ್ಕೂ ನನ್ನನ್ನು ಪೀಡಿಸುತ್ತದೆ. ಅದಕ್ಕಾಗಿಯೇ ನಾನು ಈ "ಗೌರವ"ವನ್ನು ನಿಮಗೆ ಹಿಂದಿರುಗಿಸುತ್ತಿದ್ದೇನೆ" ಎಂದು ಬರೆದಿದ್ದಾರೆ.
ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಕುಸ್ತಿಪಟುಗಳು ದೆಹಲಿಯಲ್ಲಿ ಹೋರಾಟ ಮಾಡಿದ್ದರು. ನಂತರ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಭೇಟಿ ಮಾಡಿ, ಬ್ರಿಜ್ ಭೂಷಣ್ ಅವರ ಆಪ್ತ ಬಳಗ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂಬ ಷರತ್ತು ಹಾಗು ಇನ್ನೂ ಕೆಲವು ಬೇಡಿಕೆಗಳನ್ನು ಇಟ್ಟಿದ್ದರು. ಇದಕ್ಕೆ ಸಚಿವರ ಒಪ್ಪಿಗೆ ಪಡೆದ ನಂತರ ಪ್ರತಿಭಟನೆ ಕೈಬಿಟ್ಟಿದ್ದರು. ಆದರೆ, ಇದೀಗ ಆಯ್ಕೆಯಾಗಿರುವ ಸಂಜಯ್ ಸಿಂಗ್, ಬ್ರಿಜ್ ಭೂಷಣ್ ಆಪ್ತರೆಂಬ ಕಾರಣಕ್ಕೆ ಕುಸ್ತಿಪಟುಗಳು ಭಾರಿ ನಿರಾಶೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಮಹಿಳಾ ಕ್ರಿಕೆಟ್ ಟೆಸ್ಟ್: ದೀಪ್ತಿ, ಪೂಜಾ ಆಸರೆಯ ಇನ್ನಿಂಗ್ಸ್; ಭಾರತಕ್ಕೆ ಭಾರಿ ಮುನ್ನಡೆ