ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹೊಸ ರೂಪಾಂತರಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿವೆ. ಇಂದು 63 ಹೊಸ ಒಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು, ರಾಜಧಾನಿಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 142 ತಲುಪಿದೆ.
ಇನ್ನುಳಿದಂತೆ ರಾಜ್ಯವಾರು ಒಮಿಕ್ರಾನ್ ಪ್ರಕರಣಗಳ ವರದಿ ಹೀಗಿದೆ..

ನವದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 290 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. 583 ಮಂದಿ ಕೋವಿಡ್ ಸೋಂಕಿತರು ಹೋಂ ಐಸೋಲೇಶನ್‌ನಲ್ಲಿದ್ದು, 1,103 ಸಕ್ರಿಯ ಪ್ರಕರಣಗಳಿವೆ.
ರಾಜಧಾನಿಯಲ್ಲಿ ಸೋಂಕಿನ ಪ್ರಮಾಣ ಶೇ. 0.55 ರಷ್ಟಿದೆ. 279 ಕಂಟೈನ್‌ಮೆಂಟ್ ವಲಯಗಳಿವೆ. ಕೋವಿಡ್ -19 ಮತ್ತು ಒಮಿಕ್ರಾನ್ ಪ್ರಕರಣಗಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಇಂದಿನಿಂದ ನೈಟ್ ಕರ್ಫ್ಯೂ ವಿಧಿಸಲು ನಿರ್ಧರಿಸಿದೆ. ರಾತ್ರಿ 11:00 ರಿಂದ ಬೆಳಗ್ಗೆ 5:00 ರವರೆಗೆ ನಿರ್ಬಂಧ ಜಾರಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ಕೋವ್ಯಾಕ್ಸಿನ್ ಸದ್ಯಕ್ಕೆ ಮಕ್ಕಳಿಗೆ ಲಭ್ಯವಿರುವ ಸಂಭಾವ್ಯ ಏಕೈಕ ಕೋವಿಡ್ ಲಸಿಕೆ