ನವದೆಹಲಿ: ಜಗತ್ತಿಗೆ ಕಂಠಕವಾಗಿರುವ ಕೋವಿಡ್ ಸದ್ಯಕ್ಕೆ ದೂರವಾಗುವಂತೆ ಕಾಣುತ್ತಿಲ್ಲ. ಬ್ರಿಟನ್ ಸೇರಿದಂತೆ ಹಲವು ದೇಶಗಳಲ್ಲಿ ವೇಗವಾಗಿ ಹರಡುತ್ತಿರುವ ಕೊರೊನಾ ರೂಪಾಂತರಿ ಒಮಿಕ್ರಾನ್ ಭಾರತಕ್ಕೂ ಎಂಟ್ರಿ ಕೊಟ್ಟು ತನ್ನ ವೇಗವನ್ನು ಹೆಚ್ಚಿಸಿಕೊಳ್ಳುತ್ತಿದೆ.
ದೆಹಲಿಯಲ್ಲಿ ಒಟ್ಟು 10 ಒಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಒರ್ವ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದ 9 ಮಂದಿ ಸೋಂಕಿತರು ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.
ಇದನ್ನೂ ಓದಿ: 24 ಗಂಟೆಗಳಲ್ಲಿ 7,974 ಕೋವಿಡ್ ಸೋಂಕಿತರು ಪತ್ತೆ.. ಒಮಿಕ್ರಾನ್ ಕೇಸ್ಗಳ ಸಂಖ್ಯೆ 57ಕ್ಕೆ ಏರಿಕೆ