ಫರೀದಾಬಾದ್, ಹರಿಯಾಣ: ದೇಶದೆಲ್ಲೆಡೆ ಒಮಿಕ್ರಾನ್ ಭೀತಿ ಆವರಿಸಿದೆ. ಕೊರೊನಾ ಹರಡಂತೆ ಮುನ್ನೆಚ್ಚರಿಕಾ ಕ್ರಮಗಳನ್ನ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ತೆಗೆದುಕೊಳ್ಳುತ್ತಿವೆ.ಈಗಾಗಲೇ ಹಲವಾರು ರಾಜ್ಯಗಳು ನೈಟ್ ಕರ್ಫ್ಯೂ ಹೇರಿವೆ. ಈ ಬೆನ್ನಲ್ಲೇ ಸಿಹಿ ಸುದ್ದಿಯೊಂದನ್ನು ತಜ್ಞರು ನೀಡಿದ್ದಾರೆ.
ಒಮಿಕ್ರಾನ್ ಸೋಂಕು ಕಾಣಿಸಿಕೊಂಡರೆ, ಸೋಂಕಿನ ಲಕ್ಷಣಗಳು ಅಷ್ಟೇನೂ ಗಂಭೀರವಾಗಿರುವುದಿಲ್ಲ. ಒಮಿಕ್ರಾನ್ ಸೋಂಕಿಗೆ ಚಿಕಿತ್ಸೆಗಾಗಿ ನಿರ್ದಿಷ್ಟ ಆ್ಯಂಟಿವೈರಲ್ ಮತ್ತು ಸ್ಟಿರಾಯ್ಡ್ಗಳನ್ನು ಬಳಸುವ ಅವಶ್ಯಕತೆ ಇಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಹರಿಯಾಣದ ಪೋರ್ಟೀಸ್ ಎಸ್ಕಾರ್ಟ್ ಆಸ್ಪತ್ರೆಯ ಶ್ವಾಸಕೋಶ ತಜ್ಞರಾದ ಹಾಗೂ ಆಸ್ಪತ್ರೆಯ ಹೆಚ್ಚುವರಿ ನಿರ್ದೇಶಕರಾದ ಡಾ.ರವಿ ಶೇಖರ್ ಈ ರೀತಿಯಾಗಿ ಅಭಿಪ್ರಾಯಪಟ್ಟಿದ್ದಾರೆ. ದೇಶದಲ್ಲಿಇತ್ತೀಚೆಗೆ ಒಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಈಗ ರೂಪಾಂತರಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 653 ತಲುಪಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಕೋವ್ಯಾಕ್ಸಿನ್ ಲಸಿಕೆಗೆ ಹೆಚ್ಚಿದ ಬೇಡಿಕೆ.. 2022 ರಲ್ಲಿ 60 ದೇಶಗಳಿಗೆ ರಫ್ತಾಗಲಿದೆ ಜೀವರಕ್ಷಕ