ಕೋಲ್ಕತ್ತಾ (ಪಶ್ಚಿಮ ಬಂಗಾಳ): ಪ್ರಜಾಪ್ರಭುತ್ವ ಮತ್ತು ಜಾತ್ಯತೀತತೆ ಪ್ರತಿಪಾದಿಸುವ ಭಾರತದಲ್ಲಿ ಜನತೆ ವಿಭಜಿಸಲು ಕೆಲ ಕೋಮುವಾದಿ ಶಕ್ತಿಗಳು ಪಿತೂರಿ ನಡೆಸುತ್ತಿವೆ. ಆದರೆ, ಇಂತಹ ಕೋಮು ಸೌಹಾರ್ದತೆ ಕದಡುವವರ ಮುಂದೆ ನಾನು ಎಂದು ತಲೆಬಾಗುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ.
ಕೋಲ್ಕತ್ತಾದಲ್ಲಿ ಮಂಗಳವಾರ ರಂಜಾನ್ ನಿಮಿತ್ತ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೇರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಕೋಮುವಾದಿ ಶಕ್ತಿಗಳು ದೇಶವನ್ನು ವಿಭಜಿಸಲು ಹೊರಟಿವೆ. ಪ್ರಸ್ತುತ ದೇಶದಲ್ಲಿ ಪರಿಸ್ಥಿತಿ ಸರಿಯಿಲ್ಲ. ಇಂತಹ ಈ ನಿರ್ಣಾಯಕ ಘಟ್ಟದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿರಬೇಕು. ಕೋಮು ಪ್ರಚೋದನೆಗೆ ಬಲಿಯಾಗಬೇಡಿ ಎಂದು ಜನರಲ್ಲಿ ಮನವಿ ಮಾಡಿದರು.
ಅಲ್ಲದೇ, ಬಂಗಾಳದ ಜನರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಅದನ್ನು ಕೆಲವರಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿಯೇ ಅವರು ಜನರನ್ನು ವಿಭಜಿಸಲು ಬಯಸುತ್ತಿದ್ದಾರೆ. ವಿವಿಧ ಧರ್ಮಗಳ ನಡುವಿನ ಏಕತೆಯ ಸಂಸ್ಕೃತಿಯು ಅನೇಕರಿಗೆ ಅಸೂಯೆಯ ವಿಷಯವಾಗಿದೆ. ಜನರ ಮಧ್ಯೆ ಕಂದಕಗಳನ್ನು ಸೃಷ್ಟಿಸುವ ರಾಜಕೀಯ ನಡೆಯುತ್ತಿದೆ. ಜತೆಗೆ ಕೆಲವರು ಹಿಂದೂ ಮತ್ತು ಮುಸ್ಲಿಮರ ನಡುವೆ ಉದ್ವಿಗ್ನತೆ ಉಂಟು ಮಾಡಲು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ನಾವು ಅವುಗಳನ್ನುಎಲ್ಲರೂ ಒಟ್ಟಾಗಿ ಎದುರಿಸಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ: ಕಿರಿಯ - ಯುವ ನಾಯಕರು ಕಾಂಗ್ರೆಸ್ ತೊರೆಯುತ್ತಿರುವುದೇಕೆ?