ಭುವನೇಶ್ವರ: ಒಡಿಶಾದ ಎಲ್ಲ ಜಿಲ್ಲೆಗಳಲ್ಲಿ ಒಟ್ಟಾರೆ 34 ಮಕ್ಕಳ ಸ್ನೇಹಿ ಪೊಲೀಸ್ ಠಾಣೆಗಳನ್ನು ತೆರೆಯಲಾಗುತ್ತದೆ ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ. ಜಿಲ್ಲೆಗಳಲ್ಲಿ 34 ಮಕ್ಕಳ ಸ್ನೇಹಿ ಪೊಲೀಸ್ ಠಾಣೆಯನ್ನು ಸ್ಥಾಪಿಸಲು ಸಿಎಂ ನಿರ್ದೇಶನ ನೀಡಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.
ವಾಲ್ ಪೇಂಟಿಂಗ್ ಹೊಂದಿರುವ ಈ ಪೊಲೀಸ್ ಠಾಣೆಗಳಲ್ಲಿ ಪುಸ್ತಕಗಳು, ನಿಯತಕಾಲಿಕೆಗಳು ಮತ್ತು ಪತ್ರಿಕೆಗಳು, ಹಾಸಿಗೆಗಳು, ಕುರ್ಚಿಗಳು ಮತ್ತು ಟೇಬಲ್‌ಗಳು ಇರಲಿವೆಯಂತೆ. ಹಾಗೆ ಗ್ರಂಥಾಲಯ ಸೇರಿದಂತೆ ಮಕ್ಕಳಿಗಾಗಿ ವಿಶೇಷ ಸೌಲಭ್ಯಗಳು ಇಲ್ಲಿ ಇರಲಿವೆ.
ಮಕ್ಕಳ ಹಕ್ಕುಗಳ ಪ್ರದರ್ಶನ ಫಲಕಗಳು. ಪೊಲೀಸರಿಗೆ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳು ಹಾಗೆ ಮಕ್ಕಳ ಕಲ್ಯಾಣ ಅಧಿಕಾರಿಗಳ ಸಂಪರ್ಕ ಸಂಖ್ಯೆಗಳ ಮಾಹಿತಿಯನ್ನು ಇಲ್ಲಿ ಅಳವಡಿಸಲಾಗುತ್ತದೆ. ಈ ಪೊಲೀಸ್ ಠಾಣೆಗಳಲ್ಲಿ ಆಟಿಕೆಗಳು ಮತ್ತು ಪ್ರಥಮ ಚಿಕಿತ್ಸಾ ಕಿಟ್‌ಗಳನ್ನು ಸಹ ಇರಿಸಲಾಗುತ್ತದೆಯಂತೆ.