ETV Bharat / bharat

ನವದೆಹಲಿ: ಕಟ್ಟಡಕ್ಕೆ ಬೆಂಕಿ ತಗುಲಿ ಓರ್ವ ಸಾವು, ಆರು ಜನರ ರಕ್ಷಣೆ - man was killed while at least six people were rescued after a fire broke out at a building in Rohini area

ಹತ್ತು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿದ್ದು ಸಂಜೆ 6.45 ರ ವೇಳೆಗೆ ಬೆಂಕಿಯನ್ನು ಹತೋಟಿಗೆ ತರಲಾಗಿದೆ.

ರೋಹಿಣಿ ಪ್ರದೇಶದ ಕಟ್ಟಡವೊಂದರಲ್ಲಿ ಬೆಂಕಿ
ರೋಹಿಣಿ ಪ್ರದೇಶದ ಕಟ್ಟಡವೊಂದರಲ್ಲಿ ಬೆಂಕಿ
author img

By

Published : Jun 23, 2022, 9:37 PM IST

ನವದೆಹಲಿ: ಇಲ್ಲಿನ ರೋಹಿಣಿ ಪ್ರದೇಶದ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಸಾವಿಗೀಡಾಗಿದ್ದಾನೆ. ಕನಿಷ್ಠ ಆರು ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಕ್ಟರ್ 5, ಪೂತ್ ಕಲಾನ್‌ನಲ್ಲಿರುವ ಕಟ್ಟಡದಲ್ಲಿ ಮಧ್ಯಾಹ್ನ 3.57ಕ್ಕೆ ಬೆಂಕಿ ಹೊತ್ತಿಕೊಂಡ ಬಗ್ಗೆ ಮಾಹಿತಿ ಲಭಿಸಿತ್ತು ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಹತ್ತು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿದ್ದು ಸಂಜೆ 6.45 ರ ವೇಳೆಗೆ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಕಟ್ಟಡವು ನೆಲಮಾಳಿಗೆ, ನೆಲ ಮಹಡಿ ಮತ್ತು ನಾಲ್ಕು ಮೇಲಿನ ಮಹಡಿಗಳನ್ನು ಒಳಗೊಂಡಿದೆ.

ನೆಲಮಾಳಿಗೆ, ನೆಲ ಮತ್ತು ಮೊದಲ ಮಹಡಿಯಲ್ಲಿ ಶೂ ತಯಾರಿಕಾ-ಕಮ್-ಸ್ಟೋರೇಜ್ ಘಟಕವಿತ್ತು ಮತ್ತು ಉಳಿದ ಮೇಲಿನ ಮಹಡಿಗಳನ್ನು ವಸತಿ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಅಜಯ್ ಎಂದು ಗುರುತಿಸಲಾದ ವ್ಯಕ್ತಿಯ ಶವ ಕಟ್ಟಡದ ನೆಲ ಮಹಡಿಯಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ: ಅಧಿಕಾರಿಯ ಬೀಳ್ಕೊಡುಗೆಯಲ್ಲಿ ಗುಂಡು ಹಾರಿಸಿ ಪೊಲೀಸರ ಡ್ಯಾನ್ಸ್​: 9 ಸಿಬ್ಬಂದಿ ಅಮಾನತು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.