ETV Bharat / bharat

ದುರ್ಗಾಪೂಜೆಯ ವೇಳೆ ಗುಂಡಿನ ದಾಳಿ: ಹಬ್ಬದ ಸಂಭ್ರಮದಲ್ಲಿದ್ದ ಓರ್ವ ಸಾವು, ಮೂವರಿಗೆ ಗಾಯ - Uttar Pradeshg firing news

ಅಯೋಧ್ಯೆಯಲ್ಲಿ ಹಬ್ಬದ ಸಂಭ್ರಮದಲ್ಲಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ಮೃತಪಟ್ಟು ಮೂವರು ಗಾಯಗೊಂಡರು.

One killed in Ayodhya Durga Puja pandal firing
ದುರ್ಗಾಪೂಜೆಯ ವೇಳೆ ಗುಂಡಿನ ದಾಳಿ: ಓರ್ವನ ಸಾವು, ಮೂವರಿಗೆ ಗಾಯ
author img

By

Published : Oct 14, 2021, 10:00 AM IST

ಅಯೋಧ್ಯೆ (ಉತ್ತರ ಪ್ರದೇಶ): ದುರ್ಗಾ ಪೂಜೆ ನಡೆಯುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯ ಬಳಿಯ ಫೈಜಾಬಾದ್ ಕೊತ್ವಾಲಿ ಬಳಿ ನಡೆದಿದೆ.

ಎರಡು ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ, ಬೈಕ್ ಬಿಟ್ಟು ಪರಾರಿಯಾಗಿದ್ದಾರೆ. ಮಂಜೀತ್ ಯಾದವ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಆತನ ಪಕ್ಕದಲ್ಲಿ ಕುಳಿತಿದ್ದ ಇಬ್ಬರು ಬಾಲಕಿಯರು ಸೇರಿದಂತೆ ಮೂವರಿಗೆ ಗಾಯಗಳಾಗಿದೆ ಎಂದು ಅಯೋಧ್ಯೆಯ ಎಸ್​ಎಸ್​ಪಿ ಶೈಲೇಶ್ ಪಾಂಡೆ ತಿಳಿಸಿದರು.

ಬಾಲಕಿಯರಿಗೆ ಲಖನೌದಲ್ಲಿರುವ ಕೆಜಿಎಂಯು ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯುವಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಸದ್ಯಕ್ಕೆ ಎರಡೂ ಬೈಕ್​ಗಳನ್ನು ಜಪ್ತಿ ಮಾಡಲಾಗಿದೆ. ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವೈಯಕ್ತಿಕ ದ್ವೇಷದ ಕಾರಣದಿಂದಾಗಿ ಈ ಹತ್ಯೆ ನಡೆದಿರಬಹುದು ಎಂದು ಪ್ರಾಥಮಿಕ ಮಾಹಿತಿ ಸಿಕ್ಕಿದೆ ಎಂದು ಲಖನೌ ವಲಯದ ಎಡಿಜಿ ಎಸ್​.ಎನ್​.ಸಬತ್​ ಹೇಳಿದ್ದಾರೆ. ತನಿಖೆಗಾಗಿ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ.

ಇದನ್ನೂ ಓದಿ: ಬಾಣಗಳಿಂದ ಹೊಡೆದು ಐವರು ನಾಗರಿಕರನ್ನು ಕೊಂದ ದುಷ್ಕರ್ಮಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.