ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರಧಾನಿ ಕೇರ್ಸ್ ಫಂಡ್ನಿಂದ 1 ಲಕ್ಷ ಆಮ್ಲಜನಕ ಸಾಂದ್ರಕ ಹಾಗೂ 500 ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪಿಸಲು ನಿರ್ಧರಿಸಲಾಗಿದೆ.
ಎರಡನೇ ಶ್ರೇಣಿ ನಗರ ಮತ್ತು ಸಣ್ಣ ಪಟ್ಟಣಗಳಲ್ಲಿ ಉಂಟಾಗಿರುವ ಆಮ್ಲಜನಕ ಕೊರತೆ ಸುಧಾರಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ತಿಳಿಸಿದೆ.
-
1 lakh portable oxygen concentrators will be procured, 500 more PSA oxygen plants sanctioned from PM-CARES. This will improve access to oxygen, specially in district HQs and Tier-2 cities. https://t.co/oURX74RYt1
— Narendra Modi (@narendramodi) April 28, 2021 " class="align-text-top noRightClick twitterSection" data="
">1 lakh portable oxygen concentrators will be procured, 500 more PSA oxygen plants sanctioned from PM-CARES. This will improve access to oxygen, specially in district HQs and Tier-2 cities. https://t.co/oURX74RYt1
— Narendra Modi (@narendramodi) April 28, 20211 lakh portable oxygen concentrators will be procured, 500 more PSA oxygen plants sanctioned from PM-CARES. This will improve access to oxygen, specially in district HQs and Tier-2 cities. https://t.co/oURX74RYt1
— Narendra Modi (@narendramodi) April 28, 2021
ದೇಶದಲ್ಲಿ ಈಗಾಗಲೇ 38 ಸ್ಥಾವರ ಸ್ಥಾಪಿಸಲಾಗಿದ್ದು, 2021ರ ಏಪ್ರಿಲ್ 30ರೊಳಗೆ ಇನ್ನೂ 21 ಸ್ಥಾವರ ಸ್ಥಾಪಿಸಲು ವರದಿ ಸಲ್ಲಿಕೆ ಮಾಡಲಾಗಿದೆ. ಉಳಿದಂತೆ 105 ಸ್ಥಾವರ 2021ರ ಮೇ 31ರೊಳಗೆ ಸ್ಥಾಪನೆಯಾಗಲಿವೆ ಎಂದು ತಿಳಿದು ಬಂದಿದೆ. 500 ಸಣ್ಣ ಪ್ರಮಾಣದ ನಗರ ಹಾಗೂ ಪಟ್ಟಣಗಳಲ್ಲಿ ಆಮ್ಲಜನಕ ಕೊರತೆ ಹೋಗಲಾಡಿಸಲು ಜಿಲ್ಲಾ ಕೇಂದ್ರದಲ್ಲಿರುವ ಆಸ್ಪತ್ರೆಗಳಲ್ಲಿ ಈ ಸ್ಥಾನ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿದು ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಖುದ್ದಾಗಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಅಪಘಾತದಲ್ಲಿ ಕೈ ಕಳೆದುಕೊಂಡ ಕೋವಿಡ್ ರೋಗಿ: ಶಸ್ತ್ರಚಿಕಿತ್ಸೆ ಮೂಲಕ ಕೈ ಜೋಡಿಸಿದ ವೈದ್ಯರು
ದೇಶದಲ್ಲಿ ಎರಡನೇ ಹಂತದ ಕೋವಿಡ್ ಸಮಸ್ಯ ಉಲ್ಬಣಗೊಳ್ಳುತ್ತಿದ್ದಂತೆ ಅನೇಕ ರಾಜ್ಯದ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಮಸ್ಯೆ ಉಂಟಾಗಿದೆ. ಹೀಗಾಗಿ ಅನೇಕ ದೇಶಗಳಿಂದ ಆಕ್ಸಿಜನ್ ತರಿಸಿಕೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.