ಜಮ್ಮು-ಕಾಶ್ಮೀರ: ಕಣಿವೆ ಪ್ರದೇಶ ಕುಲ್ಗಾಮ್‌ನಲ್ಲಿ ಗುಂಡಿನ ಸಪ್ಪಳ ಕೇಳಿಬಂದಿದೆ. ನಿನ್ನೆಯಿಂದ ಈ ಪ್ರದೇಶದಲ್ಲಿ ಎನ್ಕೌಂಟರ್ ನಡೆಯುತ್ತಿದೆ. ಈ ವೇಳೆ ಓರ್ವ ಉಗ್ರ ಹತನಾಗಿದ್ದಾನೆ ಎಂದು ಕಾಶ್ಮೀರದ ಐಜಿಪಿ ಮಾಹಿತಿ ನೀಡಿದ್ದಾರೆ. ಇಲ್ಲಿನ ಮಲ್ಪೊರಾ ಪ್ರದೇಶದ ಶ್ರೀನಗರ-ಜಮ್ಮು ಹೆದ್ದಾರಿ ಬಳಿ ಭದ್ರತಾ ಪಡೆ (ಬಿಎಸ್‌ಎಫ್) ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಉಗ್ರ ನಿಗ್ರಹ ಕಾರ್ಯಾಚರಣೆ ಚುರುಕು: ಈ ವರ್ಷ 96 ಭಯೋತ್ಪಾದಕರು ಮಟಾಷ್
ರಾತ್ರಿ ಎನ್ಕೌಂಟರ್ ಸ್ಥಳದಲ್ಲಿ ಸಿಲುಕಿದ್ದ 22 ನಾಗರಿಕರನ್ನು ಪೊಲೀಸರು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ. ಉಗ್ರರು ವಸತಿ ಗೃಹದಲ್ಲಿ ಆಶ್ರಯ ಪಡೆದಿದ್ದಾರೆ ಎನ್ನುವ ಮಾಹಿತಿ ದೊರಕಿದ್ದು ಇಂದು ಮುಂಜಾನೆಯಿಂದಲೇ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.